ಬಂಟ್ವಾಳದಲ್ಲಿ ಕಣಿವೆಗೆ ಬಸ್ಸು ಬಿದ್ದು ಆರು ಸಾವು
ಬಂಟ್ವಾಳ : ಇಲ್ಲಿನ ಬೆಂಜನಪದವಿಗೆ ಸಮೀಪದ ಅಮ್ಮುಂಜೆ ಕಲೈ ಎಂಬಲ್ಲಿ ಭಾನುವಾರದಂದು ಖಾಸಗಿ ಬಸ್ಸೊಂದು 50 ಅಡಿ ಆಳದ ಕಣಿವೆಗೆ ಉರುಳಿ ಬಿದ್ದುದರಿಂದ ಆರು ಮಂದಿ ಮೃಪಟ್ಟಿದ್ದು 30 ಮಂದಿಗೆ ಗಾಯವಾಗಿದೆ.
ಈ ದುರ್ಘಟನೆಯಲ್ಲಿ ಮೃತರಾದವರನ್ನು ಶರೀಫಾ (35), ಕಲಾಯಿಯ ಇಬ್ರಾಹಿಂ (56), ದೆಮ್ಮಲೆಯ ಆದಂ ಬ್ಯಾರಿ(35), ಗರಡಿ ಮನೆ ಶೌಕತ್ ಅಲಿ( 20), ಮಲ್ಲೂರು ಇಬ್ರಾಹಿಂ(70) ಮತ್ತು ಮಲ್ಲೂರಿನ ಅಬೂಶಿಯಾ (35) ಎಂದು ಗುರುತಿಸಲಾಗಿದೆ.
ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ಸಿನ ಚಾಲಕ ಬೆಂಜನಪದವಿನ ಸೋಮಪ್ಪ (45) ಮತ್ತು ನಿರ್ವಾಹಕ ಹರೀಶ್ (25) ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನೀರು ಮಾರ್ಗ ಮೂಲಕ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ಸು ತಾಳಿಪಾಡಿ ಸಮೀಪದ ಅಪಾಯಕರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಸಂಜೆ ಹೊತ್ತು ಶಾಲಾ ಮಕ್ಕಳನ್ನು ಕೊಂಡೊಯ್ಯುವ ಖಾಯಂ ಬಸ್ಸು ಇದಾಗಿದ್ದು, ಭಾನುವರದಂದು ಅಪಫಾತ ಘಟಿಸಿರುವುದರಿಂದ ಸಂಭಾವ್ಯ ಭಾರೀ ಅನಾಹುತ ತಪ್ಪಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications