ಕಮರ್ಷಿಯಲ್ ಸಿನಿಮಾಗಳಿಗೆ ಫೈನಾನ್ಸ್ಗೆ ಮುಂದಾಗಿರುವ ಐಡಿಬಿಐ
ಬೆಂಗಳೂರು : ಕಮರ್ಷಿಯಲ್ ಸಿನಿಮಾಗಳಿಗೆ ಧನ ಸಹಾಯ ಒದಗಿಸುವ ಯೋಜನೆಯಾಂದನ್ನು ಭಾರತೀಯ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್(ಐಡಿಬಿಐ) ಸದ್ಯದಲ್ಲಿಯೇ ಪರಿಚಯಿಸಲಿದೆ.
ಯೋಜನೆಯನ್ನು ಅಂತಿಮಗೊಳಿಸಲಾಗಿದ್ದು, ಅದನ್ನು ಭಾರತೀಯ ರಿಸರ್ವ್ ಬ್ಯಾಂಕ್, ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ಹಾಗೂ ಬ್ಯಾಂಕುಗಳ ಸಲಹಾ ಮಂಡಳಿಗೆ ಕಳುಹಿಸಲಾಗಿದೆ. ಮಾರ್ಚ್ 16 ರಂದು ನಡೆಯುವ ಐಡಿಬಿಐನ ಬೋರ್ಡ್ ಮೀಟಿಂಗ್ನಲ್ಲಿ ಯೋಜನೆಯನ್ನು ಔಪಚಾರಿಕವಾಗಿ ಅಂಗೀಕರಿಸಲಾಗುವುದು. ಈ ವಿಷಯವನ್ನು ಐಡಿಬಿಐ ಅಧ್ಯಕ್ಷ ಎಸ್.ಕೆ. ಚಕ್ರವರ್ತಿ ಸೋಮವಾರ ಪ್ರಕಟಿಸಿದ್ದಾರೆ.
ಉತ್ತಮ ಹಿನ್ನೆಲೆಯನ್ನು ಹೊಂದಿರುವ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಹೊಂದಿರುವ ಸಿನಿಮಾಗಳಿಗೆ ಈ ಸೌಲಭ್ಯ ದೊರೆಯುವುದು. ಪ್ರಸಕ್ತ ಹಣಕಾಸಿನ ವರ್ಷದಲ್ಲೇ ಕನಿಷ್ಠ ಎರಡು ಸಿನಿಮಾಗಳಿಗೆ ಆರ್ಥಿಕ ನೆರವನ್ನು ನೀಡಲು ಉದ್ದೇಶಿಸಿರುವ ಯೋಜನೆ, ನಂತರದ ದಿನಗಳಲ್ಲಿ ಪ್ರಾದೇಶಿಕ ಸಿನಿಮಾ ಹಾಗೂ ಟಿವಿ ಧಾರಾವಾಹಿಗಳತ್ತಲೂ ತನ್ನ ಗಮನ ಹರಿಸುವುದು. ಸಂಸ್ಥೆಗಳ ಆರ್ಥಿಕ ಸಹಾಯದಿಂದಾಗಿ ಸಿನಿಮಾ ನಿರ್ಮಾಣದ ವೆಚ್ಚ ಗಣನೀಯವಾಗಿ ತಗ್ಗುವುದು ಎನ್ನುವ ವಿಶ್ವಾಸವನ್ನು ಚಕ್ರವರ್ತಿ ವ್ಯಕ್ತಪಡಿಸಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications