ಸಾರ್ವಜನಿಕ ಗ್ರಂಥಾಲಯಗಳಲ್ಲಿ ಇಂಟರ್ನೆಟ್: ಪರಿಶೀಲನೆ
ಬೆಂಗಳೂರು : ರಾಜ್ಯದ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ರಾಜ್ಯ ಸರಕಾರ ಚಿಂತಿಸುತ್ತಿದೆ ಎಂದು ವಯಸ್ಕರ ಶಿಕ್ಷಣ, ಗ್ರಂಥಾಲಯ, ಮುದ್ರಣ ಮತ್ತು ಲೇಖನ ಸಾಮಗ್ರಿ ಖಾತೆ ರಾಜ್ಯ ಸಚಿವ ಬಾಬುರಾವ್ ಚವ್ಹಾಣ್ ಸೋಮವಾರ ಇಲ್ಲಿ ತಿಳಿಸಿದರು. ಈಗಾಗಲೇ ಆಂಧ್ರ ಪ್ರದೇಶ ಸರಕಾರ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಿದೆ, ಅದೇ ಮಾದರಿಯಲ್ಲಿ ರಾಜ್ಯದ ಗ್ರಂಥಾಲಯಗಳಲ್ಲೂ ಇಂಟರ್ನೆಟ್ ಸೌಲಭ್ಯ ನೀಡಲು ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲೂ ಗ್ರಂಥಾಲಯ ಸ್ಥಾಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ 500 ಗ್ರಾಮ ಪಂಚಾಯಿತಿಗಳಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಒಟ್ಟು 5300 ಗ್ರಾಮ ಪಂಚಾಯಿತಿಗಳಿದ್ದು, ಸಾವಿರಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ಗ್ರಂಥಾಯಲ ಇದೆ. ಉಳಿದ ಪಂಚಾಯಿತಿಗಳಲ್ಲಿ ಗ್ರಂಥಾಲಯ ಸ್ಥಾಪಿಸಲು ಒಂದು ಕೋಟಿ ರುಪಾಯಿಗಳ ಅಗತ್ಯ ಇದ್ದು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಸಂಚಾರಿ ಗ್ರಂಥಾಲಯ : ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಜನಸಂಖ್ಯೆಗನುಗುಣವಾಗಿ ಮಾಹಿತಿ ಕೇಂದ್ರ ಸ್ಥಾಪಿಸಲಾಗುವುದು ಎಂದ ಅವರು ಹುಬ್ಬಳ್ಳಿ - ಧಾರವಾಡ ಅವಳಿ ನಗರಗಳಲ್ಲಿ ಎರಡು ಸಂಚಾರಿ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications