ಎರಡನೇ ಟೆಸ್ಟ್ಗೆ ಅಗರ್ಕರ್ ಇಲ್ಲ , ಶ್ರೀನಾಥ್ ಕೂಡ ಅನುಮಾನ ?
ಮುಂಬಯಿ : ವೈರಸ್ ಜ್ವರದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಅಜಿತ್ ಅಗರ್ಕರ್ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ನಲ್ಲಿ ಭಾಗವಹಿಸುವ ಸಾಧ್ಯತೆಯನ್ನು ಬಿಸಿಸಿಐ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಶರದ್ ದಿವಾಡ್ಕರ್ ತಳ್ಳಿಹಾಕಿದ್ದಾರೆ.
ಮೊದಲ ಟೆಸ್ಟ್ನ ಮೂರನೇ ದಿನವೇ ಅಗರ್ಕರ್ ವೈರಸ್ ಜ್ವರಕ್ಕೆ ತುತ್ತಾಗಿದ್ದರು. ಪ್ರಸ್ತುತ ಅವರು ಚೇತರಿಸಿಕೊಂಡಿದ್ದರೂ, ನಿಶ್ಯಕ್ತಿಯ ಕಾರಣ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಮೂರನೇ ಟೆಸ್ಟ್ ಹೊತ್ತಿಗೆ ಅಗರ್ಕರ್ ಸಂಪೂರ್ಣವಾಗಿ ಚೇತರಿಸಿಕೊಳ್ಳಬಹುದು ಎಂದು ದಿವಾಡ್ಕರ್ ತಿಳಿಸಿದ್ದಾರೆ.
ಮತ್ತೊಬ್ಬ ಪ್ರಮುಖ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಕೂಡ ಎರಡನೇ ಟೆಸ್ಟ್ನಲ್ಲಿ ಆಡುವುದು ಅನುಮಾನ. ಬಲಗೈನ ತೋರು ಬೆರಳು ಮುರಿದುಕೊಂಡಿರುವ ಅವರು ದೈಹಿಕ ಅಸಾಮರ್ಥ್ಯತೆಯಿಂದ ಬಳಲುತ್ತಿದ್ದಾರೆ. ಎರಡನೆ ಟೆಸ್ಟ್ನಲ್ಲಿ ಒಂದೇ ಕೈನಿಂದ ಬ್ಯಾಟಿಂಗ್ ಆಡಿದ್ದ ಅವರು ಆಸ್ಟ್ರೇಲಿಯಾ ಆಟಗಾರರು ಹಾಗೂ ಪ್ರೇಕ್ಷಕರ ಅನುಕಂಪಕ್ಕೆ ಪಾತ್ರರಾಗಿದ್ದರು. ಮಾರ್ಚ್ 11, ಭಾನುವಾರದಿಂದ ಕೋಲ್ಕತಾದಲ್ಲಿ ಎರಡನೇ ಟೆಸ್ಟ್ ಪ್ರಾರಂಭವಾಗಲಿದೆ. ಮೂರನೇ ಟೆಸ್ಟ್ ಚೆನ್ನೈನಲ್ಲಿ ಮಾರ್ಚ್ 18 ರಿಂದ ಪ್ರಾರಂಭವಾಗುವುದು.
(ರಾಯ್ಟರ್ಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications