ಬಿಜಾಪುರದಲ್ಲಿ ರೈತರ ಪ್ರತಿಭಟನೆಯಿಂದಾಗಿ ಅಸ್ವಸ್ಥಗೊಂಡ ಸಚಿವ
ಬಿಜಾಪುರ : ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಭೀಮಾ ನದಿ ಪ್ರಾಂತ್ಯದ ರೈತರು ನಡೆಸಿದ ಘರಾವ್ನಿಂದಾಗಿ ತೀವ್ರ ರಕ್ತದ ಒತ್ತಡಕ್ಕೆ ತುತ್ತಾದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಕಾಶಪ್ಪನವರ್ ಅಸ್ವಸ್ಥಗೊಂಡ ಘಟನೆ ತಡವಾಗಿ ವರದಿಯಾಗಿದೆ.
ಕುಡಿಯುವ ನೀರಿನ ಕೊರತೆಯಿಂದ ಬಳಲುತ್ತಿರುವ ಕೊನೆಯ ಹಳ್ಳಿಯವರೆಗೆ ಮಹಾರಾಷ್ಟ್ರದಿಂದ ನೀರು ಬಿಡಿಸುವಂತೆ ಪ್ರವಾಸಿ ಮಂದಿರದಲ್ಲಿದ್ದ ಸಚಿವರನ್ನು ಉದ್ರಿಕ್ತ ರೈತರು ಸೋಮವಾರ ಒತ್ತಾಯಿಸಿದರು. ತಮ್ಮ ಸರ್ಕಾರ ಮಹಾರಾಷ್ಟ್ರ ಸರ್ಕಾರದಿಂದ ನೀರು ಬಿಡಿಸುವ ಕುರಿತು ಪ್ರಾಮಾಣಿಕ ಪ್ರಯತ್ನ ನಡೆಸಿದೆ. ರಾಜ್ಯ ಸರ್ಕಾರ ರೈತರ ಹಿತವನ್ನು ಎಂದೂ ಕಡೆಗಣಿಸಿಲ್ಲ ಎಂದು ಕಾಶಪ್ಪನವರ್ ಹೇಳಿದರು.
ಸಚಿವರ ಮಾತಿಗೆ ತೃಪ್ತಿಗೊಳ್ಳದ ರೈತರು, ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. ಇದರಿಂದಾಗಿ ಹಠಾತ್ತನೆ ರಕ್ತದೊತ್ತಡಕ್ಕೆ ತುತ್ತಾದ ಕಾಶಪ್ಪನವರು ಅಸ್ವಸ್ಥರಾದಾಗ ಗಾಬರಿಗೊಳ್ಳುವ ಸರದಿ ರೈತರದ್ದು . ತಕ್ಷಣವೇ ಪ್ರವಾಸಿ ಮಂದಿರಕ್ಕೆ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಯಿತು. ಸ್ವಲ್ಪ ಕಾಲದ ವಿಶ್ರಾಂತಿಯ ನಂತರ ಸಚಿವರು ಚೇತರಿಸಿಕೊಂಡರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications