ರಾಷ್ಟ್ರಪತಿಗಳಿಂದ ಸಮಗ್ರ ರಾಷ್ಟ್ರೀಯ ಶಿಕ್ಷಣ ಕಾರ್ಯಕ್ರಮ ಘೋಷಣೆ
ನವದೆಹಲಿ : ಹೆಣ್ಣು ಮಕ್ಕಳಿಗೆ ಉತ್ತ ಮ ವಿದ್ಯಾಭ್ಯಾಸ ಕಲ್ಪಿಸುವುದು ಹಾಗೂ ಎಂಟು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಶಿಕ್ಷಣ ನೀಡುವ ವಿಷಯಗಳಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (ಎಚ್‌ಆರ್‌ಡಿ)ಯು ತನ್ನ ಅಭಿವೃದ್ಧಿ ಯೋಜನೆಗಳಲ್ಲಿ ಆದ್ಯತೆ ನೀಡಿದೆ.
ರಾಷ್ಟ್ರಪತಿ ಕೆ. ಆರ್ ನಾರಾಯಣನ್ ಅವರು ಬುಧವಾರ ಬಜೆಟ್ ಚರ್ಚೆಯ ಉದ್ಘಾಟನಾ ಭಾಷಣದಲ್ಲಿ ಈ ವಿಷಯ ತಿಳಿಸಿದರು. ಸಮಗ್ರ ರಾಷ್ಟ್ರೀಯ ಶಿಕ್ಷಣ ಕಾರ್ಯಕ್ರಮ, ಸರ್ವ ಶಿಕ್ಷಾ ಅಭಿಯಾನಗಳು ಮುಖ್ಯವಾಗಿ ಹೆಣ್ಣು ಮಕ್ಕಳ ಶಿಕ್ಷಣದತ್ತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅನನುಕೂಲಗಳಿರುವ ವಿಭಾಗಗಳತ್ತ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹೆಚ್ಚು ಗಮನ ಹರಿಸುತ್ತದೆ ಎಂದು ಹೇಳಿದರು.
ಕತ್ತಲಿನ ಪ್ರತಿ ಮೂಲೆಗೂ ಶಿಕ್ಷಣ : ಮಹಿಳೆಯರಿಗೆ, ಹಿಂದುಳಿದ ವರ್ಗದವರಿಗೆ, ಬಾಲ ಕಾರ್ಮಿಕರಿಗೆ, ಅಂಗವಿಕಲ ಮತ್ತು ಅಲ್ಪ ಸಂಖ್ಯಾತರ ಮಕ್ಕಳಿಗೆ ಶಿಕ್ಷಣದ ಅಗತ್ಯದ ಬಗ್ಗೆ ಎಚ್‌ಆರ್‌ಡಿ ಇಲಾಖೆಯು ಈ ವರ್ಷ ಹೆಚ್ಚಿನ ಅಧ್ಯಯನ ನಡೆಸಿ, ಉತ್ತಮ ವಿದ್ಯಾಭ್ಯಾಸ ಕಲ್ಪಿಸಲಿದೆ. ಪ್ರಾಥಮಿಕ ಶಿಕ್ಷಣಾಭಿವೃದ್ಧಿಗೆ ಜಿಲ್ಲಾ ಮಟ್ಟದಲ್ಲಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು.
ಅನೌಪಚಾರಿಕ ವಿದ್ಯಾಕೇಂದ್ರಗಳು, ದೂರ ಶಿಕ್ಷಣಗಳ ಮೂಲಕ ಜನ ಸಾಂದ್ರತೆ ವಿರಳವಾಗಿರುವ ಪ್ರದೇಶಗಳ ಶಿಕ್ಷಣದ ಅಗತ್ಯಗಳನ್ನು ಪೂರೈಸಲಾಗುವುದು. ಇದರಿಂದಾಗಿ, ಶಾಲಾ ಕಾಲೇಜುಗಳಿಗೆ ನೇರ ಪ್ರವೇಶ ಪಡೆಯಲು ಸಾಧ್ಯವಾಗದ ಮಂದಿ ಶಿಕ್ಷಣದಿಂದ ವಂಚಿತರಾಗುವುದು ತಪ್ಪುತ್ತದೆ ಎಂದು ಮಾನವ ಸಂಪನ್ಮೂಲ ಇಲಾಖೆಯ ಮೂಲಗಳು ತಿಳಿಸಿವೆ.
ಸರ್ವರಿಗೂ ಶಿಕ್ಷಣ : ಜಿಲ್ಲಾ ವಿದ್ಯಾ ಕೇಂದ್ರಗಳು ಹಾಗೂ ತರಬೇತಿ ಸಂಸ್ಥೆಗಳು, ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಕೌನ್ಸಿಲ್‌ಗಳು ಸೇರಿದಂತೆ ವಿವಿಧ ಸಂಸ್ಥೆಗಳ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಅದೇರೀತಿ ಎನ್‌ಸಿಇಆರ್‌ಟಿ ಹಾಗೂ ಎನ್‌ಐಇಪಿಎಗಳ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಹಂತಗಳಲ್ಲಿನ ಯೋಜನೆ ಮತ್ತು ನಿರ್ವಹಣಾ ಘಟಕಗಳನ್ನು ಮತ್ತಷ್ಟು ಬಲಪಡಿಸಲು ಉದ್ದೇಶಿಸಲಾಗಿದೆ. ಇದರಿಂದಾಗಿ ಸರ್ವರಿಗೂ ಶಿಕ್ಷಣ ಎನ್ನುವ ಉದ್ದೇಶಿತ ಗುರಿಯನ್ನು ಸಾಧಿಸುವುದು ಸುಲಭವೆಂದು ಭಾವಿಸಲಾಗಿದೆ.
ಪ್ರಸಕ್ತ ಶಿಕ್ಷಣ ನೀತಿಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಹಿರಿದಾದದ್ದು . ಎನ್‌ಜಿಓಗಳು ನಡೆಸುವ ವಾಲಂಟರಿ ಶಾಲೆಗಳನ್ನು ಪ್ರೋತ್ಸಾಹಿಸಲಾಗುವುದು. ಶಿಕ್ಷಣಾಂದೋಲನವು ಗ್ರಾಮ ಮಟ್ಟಕ್ಕೂ ಯಶಸ್ವಿಯಾಗಿ ತಲುಪುವಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಪಡೆಯಲು ನಿರ್ಧರಿಸಲಾಗಿದೆ. ಖಾಸಗಿಯವರಿಂದ ಕೇವಲ ಆರ್ಥಿಕ ಕೊಡುಗೆ ಮಾತ್ರವಲ್ಲದೆ ಪರಿಣಾಮಕಾರಿ ಆಡಳಿತವನ್ನೂ ನಿರೀಕ್ಷಿಸಲಾಗಿದೆ ಎಂದು ಮಾನವ ಸಂಪನ್ಮೂಲ ಇಲಾಖೆಯ ಮೂಲಗಳು ತಿಳಿಸಿವೆ.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications