ಮೊದಲು ದೇಶ, ಆಮೇಲೆ ಧರ್ಮ ಕರ್ಮ ಎಲ್ಲ- ವೀರೇಂದ್ರ ಹೆಗ್ಗಡೆ
ಮಂಗಳೂರು : ಧರ್ಮಕ್ಕಿಂತ ದೇಶ ಮಿಗಿಲು. ದೇಶ ಸುರಕ್ಷಿತವಾಗಿದ್ದರೆ ಧರ್ಮ, ಸಂಸ್ಕೃತಿ, ಜನ ಜೀವನ ಸುಭಿಕ್ಷವಾಗಿರುತ್ತದೆ. ಅಲ್ಲಿ ಭಗವಂತ ನೆಮ್ಮದಿಯಿಂದಿರುತ್ತಾನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರಿಗೆ ಸಮೀಪದ ಮೂಲ್ಕಿಯ ಗಾಂಧಿ ಮೈದಾನದಲ್ಲಿ ದಕ್ಷಿಣ ಕನ್ನಡದ ಗಾಂಧಿ ಎಂದೇ ಹೆಸರಾದ ಕಾರ್ನಾಡ್ ಸದಾಶಿವರಾಯರ 120 ನೇ ಜನ್ಮದಿನದ ಅಂಗವಾಗಿ ಮಂಗಳವಾರ ನಡೆದ ಸಂಸ್ಮರಣಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಕಾರ್ನಾಡ್ ಜಂಕ್ಷನ್‌ನಲ್ಲಿ ಕಾರ್ನಾಡ್ ಸದಾಶಿವರಾಯರ ಪ್ರತಿಮೆಯನ್ನು ಅನಾವರಣಗೊಳಿಸಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸದಾಶಿವ ರಾಯರಂಥ ಹೋರಾಟಗಾರರಿಂದಲೇ ಹೊರತು ಸೈನಿಕರಿಂದ ಅಲ್ಲ ಎಂದರು. ತಾಲಿಬಾನ್‌ನ ಬುದ್ಧ ವಿಗ್ರಹನಾಶದ ಕಾರ್ಯವನ್ನು ಕಟುವಾಗಿ ಟೀಕಿಸಿದ ವೀರೇಂದ್ರ ಹೆಗ್ಗಡೆ ಅವರು, ಧರ್ಮದ ಹುಚ್ಚು ಆವೇಶದಲ್ಲಿ ನಡೆದ ಈ ಕೃತ್ಯವನ್ನು ದೇಶಭಕ್ತಿಯ ಕೆಲಸವೆಂದು ಬಣ್ಣಿಸುವುದು ವಿಪರ್ಯಾಸ ಎಂದು ವಿಷಾದಿಸಿದರು.
ಕಾಸರಗೋಡಿನ ಹಿರಿಯ ಸಾಹಿತಿ ಕಯ್ಯಾರ ಕಿಂಞಣ್ಣ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಶೋಧಕ ಡಾ. ಸೂರ್ಯನಾಥ ಕಾಮತ್, ಜಿ. ವರದರಾಜರ ಕಾರ್ನಾಡ್ ಸದಾಶಿವರಾಯರ ಜೀವನ ಚರಿತ್ರೆ ಕೃತಿಯನ್ನು ಬಂಡುಗಡೆ ಮಾಡಿದರು. ಮಾಜಿ ಶಾಸಕ ಅಮರನಾಥ ಶೆಟ್ಟಿ , ಶಾಸಕ ಅಭಯಚಂದ್ರ, ಸದಾಶಿವರಾಯರ ವಂಶಸ್ಥ ಶ್ರೀಧರ ಕಾರ್ನಾಡ್ ಹಾಗೂ ಕೆ. ಸೋಮಪ್ಪ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications