ತಿರುಗದ ಫ್ಯಾನು, ಅಲುಗಾಡದ ಎಲೆ, ಸೆಕೆಯೋ ಸೆಕೆ !
ಬೆಂಗಳೂರು : ರಾಯಚೂರು ಥರ್ಮಲ್ ವಿದ್ಯುತ್ ಕೇಂದ್ರದ 220 ಕೆ.ವಿ. ಸಾಮರ್ಥ್ಯದ ಎರಡು ಮಾರ್ಗಗಳಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದ ಬೆಂಗಳೂರಿನ ಕೆಲವು ಬಡಾವಣೆಗಳೂ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳು ಬುಧವಾರ ರಾತ್ರಿ ಕಗ್ಗತ್ತಲಲ್ಲಿ ಮುಳುಗಿದ್ದವು. ವಿದ್ಯುತ್ ವೈಫಲ್ಯದಿಂದಾಗಿ ಮನೆಯಲ್ಲಿ ಫ್ಯಾನ್‌ಗಳು ಗಿರಿಗಿರಿ ತಿರುಗಲೇ ಇಲ್ಲ.
ಮನೆಯಾಳಗೆ ಇದ್ದವರಿಗೆ ಕಾದ ಕಾವಲಿಯ ಮೇಲೆ ಕುಳಿತ ಅನುಭವ ಆಗಿರಲಿಕ್ಕೂ ಸಾಕು. ಮನೆಯಾಳಗೆ ದಗೆ ಎಂದು ತಾರಸಿಯ ಮೇಲೆ ಬಂದರೂ ಗಾಳಿಯ ಸುಳಿವಿರಲಿಲ್ಲ. ಮರ - ಗಿಡಗಳ ಎಲೆಗಳು ಅಲುಗಾಡಲೇ ಇಲ್ಲ. ರಾಜ್ಯದಲ್ಲಿ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಿದೆ. ಇಷ್ಟು ದಿನ ಚಳಿ ಚಳಿ ಎನ್ನುತ್ತಿದ್ದವರು ಈಗ ಮಳೆಯಾದೀತೇ ಎಂದು ಮುಗಿಲು ನೋಡುತ್ತಿದ್ದಾರೆ. ಬೇಸಿಗೆಯಲ್ಲಿ ಎಲ್ಲಿಯ ಮಳೆ. ಕೇವಲ ಸೆಕೆಯೋ ಸೆಕೆ.
ಅಂದಹಾಗೆ ರಾಜ್ಯದಲ್ಲಿ ಮುಂದುವರಿದಿದೆ ಒಣಹವೆ. ರಾಜ್ಯದ ತಾಪಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಒಳನಾಡಿನ ಕೆಲವೆಡೆ ತಾಪಮಾನ ಸಾಮಾನ್ಯ ಮಟ್ಟದಲ್ಲಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ತಾಪಮಾನದಲ್ಲಿ ಏರಿಕೆ ಆಗಿದೆ.
ರಾಜ್ಯದ ಗರಿಷ್ಠ ತಾಪಮಾನ 38ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲೂ, ಅತಿ ಕಡಿಮೆ ಉಷ್ಣಾಂಶ 14.6 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲೂ ದಾಖಲಾಗಿದೆ. ಮುನ್ಸೂಚನೆಯಂತೆ ರಾಜ್ಯಾದ್ಯಂತ ಒಣಹವೆಯೇ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯವಾಗಿ ಶುಭ್ರ ಆಕಾಶ ಇದ್ದು, ದಿನದ ಗರಿಷ್ಠ ಉಷ್ಣಾಂಶ 32 ಡಿಗ್ರಿ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದಿದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications