ಈಗಾಗಲೇ ಜಾರಿಯಾಗಿದೆ, ರಾಜ್ಯದಲ್ಲಿ ಅನಿಯಮಿತ ವಿದ್ಯುತ್ ನಿಲುಗಡೆ !
ಬೆಂಗಳೂರು : ವ್ಯತ್ಯಯವಿಲ್ಲದೆ ಗ್ರಾಹಕರಿಗೆ ವಿದ್ಯುತ್ ಪೂರೈಕೆ ಕಲ್ಪಿಸಬೇಕು ಎಂದು ಪ್ರಧಾನಿಗಳು ರಾಜ್ಯಗಳಿಗೆ ಸಲಹೆ ನೀಡಿ ವಾರ ಕಳೆಯುವ ಮುನ್ನವೇ ಲೋಡ್ಶೆಡ್ಡಿಂಗ್ ಪ್ರಕಟಣೆ ಕೆಪಿಟಿಸಿಎಲ್ನಿಂದ ಹೊರಬಿದ್ದಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅನಿಯಮಿತ ವಿದ್ಯುತ್ ನಿಲುಗಡೆ ಜಾರಿಗೆ ಬರಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಅನಿಯಮಿತ ವಿದ್ಯುತ್ ನಿಲುಗಡೆ ಜಾರಿಗೆ ಬಂದಿದ್ದು, ಇದು ವಿದ್ಯುತ್ ಜಾಲದಲ್ಲಿ ಸುಧಾರಣೆ ಆಗುವವರೆಗೂ ಮುಂದುವರೆಯಲಿದೆ ಎಂದು ಕೆಪಿಟಿಸಿಎಲ್ ಪ್ರಧಾನ ವ್ಯವಸ್ಥಾಪಕ ಎನ್. ರಾಘವೇಂದ್ರ ರಾವ್ ಹೇಳಿದ್ದಾರೆ.
ಸಂಜೆಯ ಪೀಕ್ ಅವರ್ಸ್ಗಳಲ್ಲಿ 30 ರಿಂದ 45 ನಿಮಿಷ ವಿದ್ಯುತ್ ಕಡಿತಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಜಾರಿಯಲ್ಲಿರುವ ವಿದ್ಯುತ್ ಕಡಿತ ಮತ್ತಷ್ಟು ಹೆಚ್ಚಾಗಲಿದೆ. ವಿದ್ಯುತ್ ಕಡಿತ ಶುಕ್ರವಾರ ಬೆಳಿಗ್ಗೆಯಿಂದಲೇ ಆರಂಭವಾಗಿದ್ದು, ಬೆಂಗಳೂರು ನಗರದಲ್ಲಿ 35 ನಿಮಿಷಗಳ ವಿದ್ಯುತ್ ನಿಲುಗಡೆ ಮಾಡಲಾಗಿತ್ತು .
ಕೈಗಾ, ನಾಗಝರಿ ಮತ್ತು ರಾಯಚೂರು ಶಾಖೋತ್ಪನ್ನ ಕೇಂದ್ರಗಳಲ್ಲಿ ಒಟ್ಟು ಐದು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿರುವುದು ಲೋಡ್ ಶೆಡ್ಡಿಂಗ್ಗೆ ಮುಖ್ಯ ಕಾರಣ . ರಾಜ್ಯಕ್ಕೆ ಪ್ರತಿದಿನ ನಾಲ್ಕು ಸಾವಿರ ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದ್ದು, ರಾಜ್ಯದ ವಿದ್ಯುತ್ ಸ್ಥಾವರದ ಘಟಕಗಳು ವಿದ್ಯುತ್ ಉತ್ಪಾದನೆ ನಿಲ್ಲಿಸಿರುವುದರಿಂದ 1,070 ಮೆಗಾವ್ಯಾಟ್ ವಿದ್ಯುತ್ ಕೊರತೆ ಉಂಟಾಗುತ್ತದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications