ತುಮಕೂರು : 6 ಅಂಗಡಿಗಳಿಗೆ ಬೆಂಕಿ, 10 ಲಕ್ಷ ಭಸ್ಮ
ತುಮಕೂರು : ಹೂವಿನ ಅಂಗಡಿ, ಹಣ್ಣಿನ ಅಂಗಡಿ, ಸೈಕಲ್ ಷಾಪ್, ಸಿಹಿ ತಿಂಡಿಗಳ ಅಂಗಡಿ, ಬೇಕರಿ, ಹೋಟೆಲ್ - ಭೇದಭಾವ ತೋರದ ಬೆಂಕಿ ಹೊತ್ತಿಕೊಂಡು ತಣ್ಣಗಾಗುವ ಹೊತ್ತಿಗೆ 6 ಅಂಗಡಿಗಳಿಂದ ಒಟ್ಟು 10 ಲಕ್ಷ ರುಪಾಯಿ ನಷ್ಟವಾಗಿತ್ತು . ಬೆಂಕಿ ಹೊತ್ತಿಕೊಂಡದ್ದು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ . ಗುರುವಾರ ಇನ್ನೂ ಬಿಸಿಲು ಬಲಿಯದ ಬೆಳಿಗ್ಗೆಯೇ.
ಬೆಂಕಿ ಹೊತ್ತಿಕೊಂಡು ಅಂಗಡಿಗಳ ಪಕ್ಕದಲ್ಲಿಯೇ ಪೆಟ್ರೋಲ್ ಬಂಕ್ ಇತ್ತು , ಬಿಳಿ ಸೀಮೆಎಣ್ಣೆ ಅಂಗಡಿ ಇತ್ತು . ಸದ್ಯ ಸಮಯಕ್ಕೆ ಸರಿಯಾಗಿ ಆಗಮಿಸಿದ ಮೂರು ಅಗ್ನಿಶಾಮಕ ದಳದ ವಾಹನ- ಸಿಬ್ಬಂದಿಯ ಸುಮಾರು 60 ನಿಮಿಷಗಳ ಹೋರಾಟ ಹೆಚ್ಚಿನ ಅನಾಹುತವನ್ನು ತಪ್ಪಿಸಿತು. ಜನ ಸಮಾಧಾನದ ನಿಟ್ಟುಸಿರು ಬಿಟ್ಟರು. ಬೆಂಕಿ ಆಕಸ್ಮಿಕಕ್ಕೆ ವಿದ್ಯುತ್ ಷಾರ್ಟ್ ಸರ್ಕ್ಯೂಟ್ ಕಾರಣ ಎಂದು ನಂಬಲಾಗಿದೆ. ಅಂದಹಾಗೆ, ಗುರುವಾರದಿಂದಲೇ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಜಾರಿಗೆ ಬಂದಿದೆ.
ದುರಂತ ಸಂಭವಿಸಿದ ಸ್ಥಳಕ್ಕೆ ನಗರ ಡಿವೈಎಸ್ಪಿ ಶ್ರೀಕಂಠಯ್ಯ, ನಗರ ಸರ್ಕಲ್ ಎಸ್‌ಐ ಎಚ್.ಎಂ. ಓಂಕಾರಯ್ಯ ಭೇಟಿಕೊಟ್ಟಿದ್ದರು. ಏಪ್ರಿಲ್‌ನಲ್ಲಿ ಜರುಗಲಿರುವ ಸಿದ್ಧಗಂಗಾ ಶ್ರೀಗಳ ಗುರುವಂದನಾ ಕಾರ್ಯಕ್ರಮ ಸಿದ್ಧತೆಯಲ್ಲಿ ವ್ಯಸ್ತರಾಗಿರುವ ಸಂಸದ ಜಿ.ಎಸ್. ಬಸವರಾಜು ಅವರಿಗೆ ಕೂಡ ಸ್ಥಳಕ್ಕೆ ಧಾವಿಸಲು ತುಸು ಪುರುಸೊತ್ತು ಸಿಕ್ಕಿದ್ದು ವಿಶೇಷ.
(ಇನ್ಫೋ ವಾರ್ತೆ)
ವಾರ್ತಾ ಸಂಚ-ಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications