ಬಿಸಿಲಿನ ಬೇಗೆ, ಮನೆಯಾಳಗೆ ಧಗೆ
ಬೆಂಗಳೂರು : ನಾಗಝರಿ, ಕೈಗಾ ಹಾಗೂ ರಾಯಚೂರು ವಿದ್ಯುತ್ ಘಟಕದಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆಯ ಪರಿಣಾಮವಾಗಿ ರಾಜ್ಯದಲ್ಲಿ ಇನ್ನೂ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದೆ. ಈ ಮಧ್ಯೆ ಅನಿಯಮಿತ ಲೋಡ್ಷೆಡ್ಡಿಂಗ್ ಜಾರಿಯ ಪ್ರಕಟಣೆಯನ್ನೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹೊರಡಿಸಿದೆ. ಮೊದಲೇ ಉರಿಯುತ್ತಿರುವ ಬಿಸಿಲಿನ ಬೇಗೆಗೆ ವಿದ್ಯುತ್ ವ್ಯತ್ಯಯದಿಂದ ತಿರುಗದ ಫ್ಯಾನ್ಗಳು ತುಪ್ಪ ಸುರಿಯುತ್ತಿವೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರಿದಿತ್ತು. ರಾಜ್ಯದ ಗರಿಷ್ಠ ಉಷ್ಣಾಂಶದಲ್ಲಿ ಅಲ್ಪ ಬದಲಾವಣೆ ಇತ್ತು. ಕನಿಷ್ಠ ಉಷ್ಣಾಂಶದಲ್ಲೂ ಬದಲಾವಣೆ ಕಂಡುಬಂದಿದೆ. ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶ ಬಹುತೇಕ ಸಾಮಾನ್ಯ ಮಟ್ಟದಲ್ಲಿತ್ತು. ಕರಾವಳಿ ಹಾಗೂ ಉತ್ತರ ಒಳನಾಡನ ಕೆಲವೆಡೆ ಕನಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ.
ರಾಜ್ಯದ ಅತಿ ಹೆಚ್ಚಿನ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲೂ ಅತಿ ಕಡಿಮೆ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್ ಬೆಳಗಾವಿ ವಿಮಾನ ನಿಲ್ದಾಣದಲ್ಲೂ ಇತ್ತು. ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ವೀಕ್ಷಣಾಲಯದ ವರದಿ ತಿಳಿಸಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications