ಗಂಗಾವತಿ ಬಳಿ ಲಾರಿ - ಟೆಂಪೋ ಡಿಕ್ಕಿ 4 ಸಾವು, 11 ಜನರಿಗೆ ಗಾಯ
ರಾಯಚೂರು : ಗಂಗಾವತಿಯಿಂದ ಕೊಪ್ಪಳದ ಕಡೆಗೆ ಹೊರಟಿದ್ದ ಟೆಂಪೊ ಒಂದಕ್ಕೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಇತರ 11 ಮಂದಿ ಗಾಯಗೊಂಡಿದ್ದಾರೆ.
ಲಾರಿ ಹಾಗೂ ಟೆಂಪೋ ನಡುವೆ ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಎರಡೂ ವಾಹನಗಳು ಪಕ್ಕದ ಹಳ್ಳಕ್ಕೆ ಬಿದ್ದವು. ಹಳ್ಳಕ್ಕೆ ಉರುಳಿದ ಟೆಂಪೋ ಮೇಲೆ ಲಾರಿಯೂ ಮಗುಚಿದ ಕಾರಣ ಹೆಚ್ಚಿನ ಸಾವು - ನೋವು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮೃತಪಟ್ಟವರನ್ನು ಮಂಜುನಾಥ (12), ಖಾದರ್ ಸಾಬ್ (18), ಹುಸೇನಪ್ಪ (45) ಹಾಗೂ ವೀರೇಶಪ್ಪ (18) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ವೀರೇಶಪ್ಪನನ್ನು ಬಳ್ಳಾರಿಯ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದರು. ಉಳಿದ ಮೂವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಗಂಗಾವತಿ ಸಮೀಪದ ಚಿಕ್ಕಿ ಬೆಣಕಲ್ ಸಮೀಪ ಈ ಅಪಘಾತ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.
(ರಾಯಚೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications