ನಾಗರಿಕರ ಮೇಲೆ ದುಷ್ಕರ್ಮಿಗಳ ಹಲ್ಲೆ : ಮಂಗಳೂರು ಉದ್ವಿಗ್ನ
(ಮಂಗಳೂರು ಪ್ರತಿನಿಧಿಯಿಂದ)
ಮಂಗಳೂರು : ಇಬ್ಬರು ನಾಗರಿಕರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆಯಿಂದಾಗಿ ನಗರದಲ್ಲಿ ಬಿಗು ವಾತಾವರಣ ಸೃಷ್ಟಿಯಾಗಿದ್ದು , ಮಾರ್ಚ್ 15 ರವರೆಗೆ ಅಪರಾಧಿ ಪ್ರಕ್ರಿಯಾ ಸಂಹಿತೆಯ 144ನೇ ನಿಯಮದನ್ವಯ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳವಾರ ಬೆಳಗಿನ ಜಾವ ಬಂಟ್ವಾಳ ತಾಲ್ಲೂಕಿನ ಫರಂಗಿ ಪೇಟೆಯಲ್ಲಿ ನಡೆದು ಹೋಗುತ್ತಿದ್ದ ವ್ಯಾಪಾರಿ ವಿಶ್ವನಾಥ ಪೈ (65) ಹಾಗೂ ಅವರ ಸಹಾಯಕ ಮುಂಡಪ್ಪ (45) ಅವರ ಮೇಲೆ ಅಪರಿಚಿತರು ಮಾರಣಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡು ರಸ್ತೆಯಂಚಿನಲ್ಲೇ ಕುಸಿದುಬಿದ್ದಿದ್ದ ಗಾಯಾಳುಗಳನ್ನು , ಗಸ್ತಿನಲ್ಲಿದ್ದ ಬಂಟ್ವಾಳ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.
ಪ್ರಕರಣದ ಬಗ್ಗೆ ವಿಶ್ವನಾಥ ಪೈ ಅವರ ಪುತ್ರ ವಿವೇಕ ಪೈೖ ಬಂಟ್ವಾಳ ಪೋಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಕಳೆದ ಶನಿವಾರ ಕೂಡ ಇಲ್ಲಿ ವ್ಯಕ್ತಿಯೋರ್ವರ ಮೇಲೆ ದುಷ್ಕರ್ಮಿಗಳು ಮಾರಣಾಯುಧಗಳಿಂದ ಹಲ್ಲೆ ನಡೆಸಿದ್ದರು.
ಉದ್ರಿಕ್ತ ಪರಿಸ್ಥಿತಿ, ಬಂದ್ ಆಚರಣೆ
ಫರಂಗಿ ಪೇಟೆಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಉದ್ರಿಕ್ತ ವಾತಾವರಣ ಸೃಷ್ಟಿಯಾಗಿದ್ದು , ವ್ಯಾಪಾರಿಗಳು ಬಂದ್ ಆಚರಿಸಿದರು. ಮಂಗಳೂರಿನಿಂದ ಮೀಸಲು ಪಡೆಯ 5 ಫ್ಲಟೂನ್ಗಳನ್ನು ಘಟನೆ ನಡೆದ ಸ್ಥಳಕ್ಕೆ ಕಳುಹಿಸಲಾಗಿದ್ದು , ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications