ತುಮಕೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಸಾಧ್ಯವಿಲ್ಲ
ಬೆಂಗಳೂರು : ಸ್ಥಳೀಯ ಪ್ರಜಾ ಪ್ರತಿನಿಧಿಗಳ ಬೆಂಬಲ ಇಲ್ಲದೇ ಇರುವುದರಿಂದ ತುಮಕೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದು ಸಾಧ್ಯವಿಲ್ಲ ಎಂದು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧಿಕೃತವಾಗಿ ಘೋಷಿಸಿದೆ.
ಸೋಮವಾರ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರೊ. ಎನ್. ಬಸವಾರಾಧ್ಯ ಅವರಿಗೆ ಅಧಿಕೃತ ಪತ್ರ ಬರೆದಿದ್ದು, ಇದರಿಂದಾಗಿ ಈ ಬಾರಿಯ 69ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇನವನ್ನು ಬೆಂಗಳೂರಿನಲ್ಲಿಯೇ ನಡೆಸುವ ನಿರೀಕ್ಷೆ ಇದೆ.
ತುಮಕೂರು ಜಿಲ್ಲೆಯ ಇಬ್ಬರು ಸಚಿವರು, ಲೋಕಸಭಾ ಸದಸ್ಯರು ಮತ್ತು ಶಾಸಕರ ನಡುವೆ ಸಮ್ಮೇಳನ ನಡೆಸುವ ವಿಚಾರವಾಗಿ ಒಮ್ಮತ ಇಲ್ಲದೇ ಇರುವುದರಿಂದ ಸಮ್ಮೇಳನ ಸಿದ್ಧತೆಗೆ ಚಾಲನೆ ನೀಡುವ ಸ್ವಾಗತ ಸಮಿತಿಯ ರಚಿಸುವುದು ಸಾಧ್ಯವಾಗಲೇ ಇಲ್ಲ. ಬೃಹತ್ ಧಾರ್ಮಿಕ ಹಾಗೂ ಶಿಕ್ಷಣ ಸಂಸ್ಥೆ ಎನಿಸಿಕೊಂಡಿರುವ ತುಮಕೂರಿನ ಸಿದ್ಧಗಂಗಾ ಮಠಕೂಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿ ಯಾವುದೇ ಉತ್ಸಾಹ ತೋರಿಸಿಲ್ಲ.
ಈ ನಡುವೆ ಫೆಬ್ರವರಿ 24ರಂದು ಬೆಂಗಳೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಭೆಯಲ್ಲಿ ಸ್ವಾಗತ ಸಮಿತಿ ರಚನೆಯ ವಿಳಂಬ ಕುರಿತು ಚರ್ಚೆ ನಡೆದಿತ್ತು. ಮಾರ್ಚ್ 5ರೊಳಗೆ ಸಮಿತಿಯ ರಚನೆ ಆಗದೇ ಇದ್ದಲ್ಲಿ ಬೆಂಗಳೂರಿನಲ್ಲಿಯೇ ಸಮ್ಮೇಳನ ನಡೆಸುವ ಅಧಿಕಾರವನ್ನು ಪರಿಷತ್ತಿನ ಅಧ್ಯಕ್ಷರಿಗೇ ನೀಡಲಾಗಿತ್ತು.
ಬಸವಾರಾಧ್ಯ ಹೇಳಿಕೆ : ತುಮಕೂರಿನಲ್ಲಿ 69ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳ ಪರೀಕ್ಷೆಗಳು ಮುಗಿದ ನಂತರ ಬಹುತೇಕ ಮೇ ತಿಂಗಳಿನ ಅಂತ್ಯದಲ್ಲಿ ಸಮ್ಮೇಳನವನ್ನು ಸರಳವಾಗಿ ಬೆಂಗಳೂರಿನಲ್ಲೇ ನಡೆಸುವ ಸಾಧ್ಯತೆ ಇದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಪ್ರೊ. ಎನ್. ಬಸವಾರಾಧ್ಯ ತಿಳಿಸಿದ್ದಾರೆ.
ಕನ್ನಡದ ಬಹುತೇಕ ಸಾಹಿತಿಗಳು ಸಮ್ಮೇಳನ ಯಾವುದೇ ಕಾರಣಕ್ಕೂ ನಿಲ್ಲ ಬಾರದು. ಸರಳವಾಗಿ ಆದರೂ ಸಮ್ಮೇಳನವನ್ನು ಬೆಂಗಳೂರಿನಲ್ಲೇ ನಡೆಸಿ ಎಂದು ಸಾಹಿತ್ಯ ಪರಿಷತ್ತನ್ನು ಒತ್ತಾಯಿಸಿದ್ದಾರೆ. ಆದರೆ, ಗುಜರಾತ್ ಭೂಕಂಪದ ಹಿನ್ನೆಲೆಯಲ್ಲಿ ಸಾಹಿತ್ಯ ಸಮ್ಮೇಳನವನ್ನು ಮುಂದೂಡುವ ಕುರಿತು ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಈ ಹಿಂದೆ ಸೂಚನೆ ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications