ಸಂದು ಹೋದ ಮಾಯದಂಥಾ ಮಳೆ
ಮಂಗಳವಾರ ಬೆಳಿಗ್ಗೆ ಕಣ್ಣುಜ್ಜಿಕೊಳ್ಳುತ್ತಾ ಹೊಸಿತಿಲಾಚೆ ಬಂದ ಬೆಂಗಳೂರಿಗರನ್ನು ಸ್ವಾಗತಿಸಿದ್ದು ತಣ್ಣನೆ ಗಾಳಿ ಹಾಗೂ ಮಣ್ಣಿನ ಗಮಲು. ರಾತ್ರಿ ಯಾವ ಮಾಯದಲ್ಲೋ ಹನಿದ ಮಳೆ, ಇರುಳು ತಾನು ಸಂದು ಹೋದುದಕ್ಕೆ ಮುಂಜಾನೆಯೂ ಸಾಕ್ಷಿ ಉಳಿಸಿತ್ತು . ಅಂಗಳಕ್ಕೆ ನೀರು ಚಿಮುಕಿಸುವ ಬೆಳಿಗ್ಗೆಯ ಬೇಜಾರು ಮಳೆಯಿಂದಾಗಿ ಬಗೆಹರಿದ ಖುಷಿ , ಗೃಹಿಣಿಯರಿಗೆ.
ದಕ್ಷಿಣ ಕರ್ನಾಟಕದ ಒಳನಾಡಿನ ಕೆಲ ಭಾಗಗಳಲ್ಲಿ ಹನಿ ಉದುರಿದ್ದು ಹೊರತು ಪಡಿಸಿದರೆ, ಯಥಾ ಪ್ರಕಾರ ಒಣಹವೆಯ ಪ್ರಾಬಲ್ಯ ರಾಜ್ಯದಲ್ಲಿ ಮುಂದುವರಿದಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಒಳಭಾಗಗಳಲ್ಲಿ ಒಣಹವೆ, ಹೆಚ್ಚಿನ ತಾಪಮಾನ ದಾಖಲಾಗಿದೆ.
ಮಂಗಳವಾರದ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಷಿಯಸ್ಸನ್ನು ರಾಯಚೂರು ದಾಖಲಿಸಿದೆ. ಅದೇ ರಾಯಚೂರಿನ ಶಕ್ತಿ ನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿನ ಘಟಕದ ವೈಫಲ್ಯದಿಂದ ರಾಜ್ಯದಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆಯಾಟ ನಡೆದಿರುವುದನ್ನು ಇಲ್ಲಿ ನೆನೆಯಬಹುದು. ಇನ್ನು ದಿನದ ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಷಿಯಸ್ ಬೆಳಗಾವಿಯಲ್ಲಿ ದಾಖಲಾಗಿದೆ.
ಬುಧವಾರ ಕೂಡ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವುದೆಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ದಕ್ಷಿಣ ಕರ್ನಾಟಕದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಂಗಳವಾರದಂಥದ್ದೇ ತುಂತುರು ಹನಿಯ ಮಳೆಯಾಗಬಹುದು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ. ಸಂಜೆ ಅಥವಾ ರಾತ್ರಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆಯೂ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications