ನೀರಾ ಇಳಿಸಲು ತಕ್ಷಣವೇ ಅನುಮತಿ ನೀಡಲಾಗದು -ಖರ್ಗೆ
ಬೆಂಗಳೂರು : ಸೇಂದಿ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸುವ ಉದ್ದೇಶ ಸರಕಾರಕ್ಕಿರುವುದರಿಂದ ರಾಜ್ಯದಲ್ಲಿ ಮತ್ತೆ ಸೇಂದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮಂಗಳವಾರ, ಪ್ರಶ್ನೋತ್ತರ ಅವಧಿಯಲ್ಲಿ ಅವರು ಎಡಿಎಂಕೆ ಶಾಸಕ ಭಕ್ತವತ್ಸಲ ಅವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡುತ್ತಿದ್ದರು. ನುಸಿ ರೋಗದಿಂದ ನಷ್ಟ ಅನುಭವಿಸುತ್ತಿರುವ ತೆಂಗು ಬೆಳೆಗಾರರಿಗೆ ನೀರಾ ಇಳಿಸಲು ಅನುಮತಿ ನೀಡಬೇಕು ಎಂಬ ಬೇಡಿಕೆಯ ಬಗ್ಗೆ ಸರಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಖರ್ಗೆ ಹೇಳಿದರು.
ನೀರಾ ಹೆಸರಿನಲ್ಲಿ ಸಮಾಜಘಾತುಕ ಶಕ್ತಿಗಳು ಲಾಭ ಪಡೆಯಬಹುದಾದ್ದರಿಂದ ತಕ್ಷಣವೇ ನೀರಾ ಇಳಿಸಲು ಅನುಮತಿ ನೀಡುವುದು ಸಾಧ್ಯವಿಲ್ಲ . ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮೂರ್ತೆದಾರರ ಸಹಕಾರ ಸಂಘಗಳ ಮೂಲಕ ಸೇಂದಿ ಮಾರಾಟಕ್ಕೆ ಅನುಮತಿ ಇದೆ. ಆದರೆ ರಾಜ್ಯದ ಇತರೆಡೆಗಳಲ್ಲಿ ಸೇಂದಿ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಸಚಿವರು ವಿವರಿಸಿದರು.
ತೆಂಗು ಬೆಳೆಗಾರರನ್ನು ಸಂಕಷ್ಟದಿಂದ ಪಾರುಮಾಡಲು ಒಂದೆರಡು ವರ್ಷಗಳ ಕಾಲವಾದರೂ ನೀರಾ ಇಳಿಸಲು ಅನುಮತಿ ನೀಡಬೇಕು ಎಂದು ಜನತಾ ದಳ ಶಾಸಕ ಬೈರೇಗೌಡರು ಸರಕಾರವನ್ನು ಆಗ್ರಹಿಸಿದಾಗ , ನೀರಾ ಹೆಸರಿನಲ್ಲಿ ಸೇಂದಿ ಮಾರಲಾಗುತ್ತಿದೆ. ಗಾಂಜಾ, ಆಫೀಮುಗಳನ್ನೂ ಬೆರೆಸಲಾಗುತ್ತಿದೆ. ಆದ್ದರಿಂದ ನೀರಾ ಇಳಿಸಲು ಅನುಮತಿ ನೀಡುವುದು ಸಲ್ಲ ಎಂದು ಹನುಮೇ ಗೌಡರು ಪ್ರತಿಭಟಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications