ಅಪರೂಪದ ಗೆಲುವಿಗೆ ಹರ್ಷದೋಕುಳಿ, ಬೀದಿಗಿಳಿದ ಬೆಂಗಳೂರು
ಬೆಂಗಳೂರು : ಆಸ್ಟ್ರೇಲಿಯಾದ ಸತತ 16 ಟೆಸ್ಟ್‌ಗಳ ಗೆಲುವಿನ ಓಟಕ್ಕೆ ಕಡಿವಾಣ ಹಾಕಿ ಭಾರತ ಸಾಧಿಸಿದ ಅಪರೂಪದ ಗೆಲುವಿಗೆ ಇಡೀ ಬೆಂಗಳೂರೇ ಬೀದಿಗಿಳಿದು ಸಂಭ್ರಮಿಸುತ್ತಿದೆ. ರಾಜ್ಯದ ವಿವಿಧ ಭಾಗಗಳಲ್ಲೂ ಕ್ರಿಕೆಟ್ ಅಭಿಮಾನಿಗಳು ವಿಜಯೋತ್ಸವ ಆಚರಿಸುತ್ತಿದ್ದಾರೆ.
ಕಾಂಗರೂ ಪಡೆಯ ಕೊನೆಯ ವಿಕೆಟ್ ಉರುಳಿದ್ದೇ ತಡ, ಬೆಂಗಳೂರಿನ ಬೀದಿಗಳಲ್ಲಿ ಪಟಾಕಿಗಳ ಸಿಡಿತದ ಮೊರೆತ ಪ್ರಾರಂಭವಾಯಿತು. ಅನೇಕ ಅಭಿಮಾನಿಗಳು ಬೀದಿಗಿಳಿದು ನೃತ್ಯ ಮಾಡಲು ಆರಂಭಿಸಿದರು. ಪರಸ್ಪರ ಸಿಹಿ ಹಂಚಿಕೊಳ್ಳುತ್ತಾ ಸಂಭ್ರಮಿಸಿದರು. ಇದೇ ಸಂಭ್ರಮ ದೇಶದ ಇತರ ನಗರಗಳಲ್ಲೂ ಕಂಡು ಬಂದಿದೆ ಎಂದು ಯುಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅದ್ಭತ ಗೆಲುವು : ಭಾರತ ಸಾಧಿಸಿದ ಗೆಲುವು ಟೆಸ್ಟ್ ಕ್ರಿಕೆಟ್‌ನಲ್ಲೇ ಅತ್ಯದ್ಭುತವಾದ್ದು ಎಂದು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ನ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಬಣ್ಣಿಸಿದ್ದಾರೆ. ಫಾಲೋಆನ್ ಪಡೆದ ನಂತರ ತಂಡ ಅತ್ಯುತ್ತಮ ಪ್ರತಿರೋಧದ ಹೋರಾಟ ನೀಡಿತು. ಇದರಿಂದಾಗಿ ಚೆನ್ನೈನಲ್ಲಿನ ಅಂತಿಮ ಟೆಸ್ಟ್‌ಗೆ ತಂಡದ ಆತ್ಮ ವಿಶ್ವಾಸ ಇಮ್ಮಡಿಸಿದೆ ಎಂದು ಬ್ರಿಜೇಶ್ ಅಭಿಪ್ರಾಯ ಪಟ್ಟಿದ್ದಾರೆ.
ಭಾರತದ ಪರ ವಿವಿಎಸ್ ಲಕ್ಷ್ಮಣ್ ಹಾಗೂ ರಾಹುಲ್ ದ್ರಾವಿಡ್ ಅತ್ಯುತ್ತಮ ಪ್ರದರ್ಶನ ನೀಡಿದರು. ಹರ್ಭಜನ್ ಸಿಂಗ್‌ರ 13 ವಿಕೆಟ್‌ಗಳ ಸಾಧನೆಯೂ ಗಮನಾರ್ಹ. ಭಾರತದ ಗೆಲುವಿನಲ್ಲಿ ಈ ತ್ರಿವಳಿಗಳ ಪಾತ್ರ ಮುಖ್ಯವಾದುದು ಎಂದು ಬ್ರಿಜೇಶ್ ಹೇಳಿದ್ದಾರೆ.
(ಇನ್ಫೋ ವಾರ್ತೆ/ ಯುಎನ್‌ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications