ಸಹಜ ಸ್ಥಿತಿಯತ್ತ ಫರಂಗಿಪೇಟೆ, ಹಲ್ಲೆಗೆ ಸಂಬಂಧಿಸಿದಂತೆ ಮೂವರ ಸೆರೆ
(ಮಂಗಳೂರು ಪ್ರತಿನಿಧಿಯಿಂದ)
ಮಂಗಳೂರು : ಇಬ್ಬರು ನಾಗರಿಕರ ವಿಫಲ ಕೊಲೆಗೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಫರಂಗಿಪೇಟೆ ಸಹಜ ಸ್ಥಿತಿಗೆ ಮರಳುತ್ತಿದ್ದು , ಗುರುವಾರ ಕೆಲವು ಅಂಗಡಿ ಮುಂಗಟ್ಟುಗಳು ತೆರೆದಿದ್ದವು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು , ಬಂಧಿತರ ವಿರುದ್ಧ ಕೊಲೆ ಮೊಕದ್ದಮೆ ಹೂಡಲಾಗಿದೆ. ಅಮ್ಮೆ ಮಾರ್‌ನ ಅಶ್ರಫ್ ಯಾನೆ ಚೋಟೆಮಿಯಾ (21), ಅಮ್ಮೆ ಮಾರ್ ಬಡೆಮಿಯಾ (21) ಹಾಗೂ ಪುದುವಿನ ಸಲೀಂ ಯಾನೆ ಡೈಮಂಡ್ ಸಲೀಂ (21) ಬಂಧಿತರು. ಗುರುವಾರ ಬಂಧಿತರನ್ನು ನ್ಯಾಯಾಲಯದೆದುರು ಹಾಜರು ಪಡಿಸಲಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಹೇಮಂತ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಫರಂಗಿಪೇಟೆ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ, ಸೆಕ್ಷನ್ 144 ರ ಅನ್ವಯ ಹೇರಲಾಗಿದ್ದ ನಿಷೇಧಾಜ್ಞೆ ಗುರುವಾರ ಸಂಜೆಗೆ ಕೊನೆಯಾಗಿದೆ. ಬಂಧಿತ ಆರೋಪಿಗಳು ಈ ಮೊದಲೂ ಕೋಮು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದರು. ಅವರಿಂದ ಹಲ್ಲೆಗೆ ಬಳಸಿದ್ದ ತಲವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಹೇಮಂತಕುಮಾರ್ ಹೇಳಿದ್ದಾರೆ.
ಮತ್ತೊಂದೆಡೆ ಬಂಧಿತರನ್ನು ಜಾಮೀನಿನ ಮೇಲೆ ಬಿಡಿಸುವ ಪ್ರಯತ್ನಗಳು ಚುರುಕುಗೊಳ್ಳುತ್ತಿದ್ದು , ಅದಕ್ಕಾಗಿ ಹಣ ಸಂಗ್ರಹ ಕಾರ್ಯಗಳು ನಡೆಯುತ್ತಿವೆ. ಫರಂಗಿಪೇಟೆ ಸಹಜಸ್ಥಿತಿಗೆ ಮರಳುತ್ತಿರುವಂತೆ ಕಂಡರೂ, ಪರಿಸ್ಥಿತಿಯಲ್ಲಿನ ಬಿಗು ಇನ್ನೂ ತಿಳಿಯಾಗಿಲ್ಲ . ಈ ನಡುವೆ, ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿದ್ದ ವಿಶ್ವನಾಥ್ ಪೈ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು , ಅವರನ್ನು ತುರ್ತು ಚಿಕಿತ್ಸಾ ವಿಭಾಗದಲ್ಲಿಡಲಾಗಿದೆ. ಮತ್ತೊಬ್ಬ ಗಾಯಾಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications