ಪಟ್ಟು ಬಿಡದ ಮಮತಾ, ಎನ್‌ಡಿಎಯಿಂದ ತೃಣಮೂಲ ಹೊರಕ್ಕೆ
ನವದೆಹಲಿ : ಇತ್ತೀಚೆಗೆ ಸಂಭವಿಸಿದ ರಾಜಕೀಯ ಕೋಲಾಹಲದ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟದಿಂದ ಹೊರ ಬರಲು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ. ಮತ್ತೊಂದು ನಿರೀಕ್ಷಿತ ಬೆಳವಣಿಗೆಯಲ್ಲಿ ಸಮತಾ ಪಕ್ಷದ ಅಧ್ಯಕ್ಷೆ ಜಯಾ ಜೇಟ್ಲಿ , ಪಕ್ಷದ ಅಧ್ಯಕ್ಷ ಪದಕ್ಕೆ ರಾಜೀನಾಮೆ ನೀಡಿದ್ದಾರೆ.
ತೃಣಮೂಲ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಎನ್‌ಡಿಎಯಿಂದ ಹೊರ ಬರುವ ವಿಷಯವನ್ನು ಕಿಕ್ಕಿರಿದ ಸುದ್ದಿಗೋಷ್ಠಿಯಲ್ಲಿ ಗುರುವಾರ ಪ್ರಕಟಿಸಿದರು. ತೆಹಲ್ಕಾ ಡಾಟ್ ಕಾಂ ಬಯಲು ಮಾಡಿದ ರಕ್ಷಣಾ ಅವ್ಯವಹಾರಗಳ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಮಮತಾ, ತಮ್ಮ ಬೇಡಿಕೆಯನ್ನು ಪ್ರಧಾನಿ ವಾಜಪೇಯಿ ತಿರಸ್ಕರಿಸಿದ ಕಾರಣ ಒಕ್ಕೂಟದಿಂದ ಹೊರಬಂದಿದ್ದಾರೆ.
ನಮ್ಮ ಪಕ್ಷ ಭ್ರಷ್ಟಾಚಾರವನ್ನು ಬೆಂಬಲಿಸಲು ಇಷ್ಟ ಪಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ ಮಮತಾ, ಫರ್ನಾಂಡಿಸ್ ಅವರನ್ನು ಕೈ ಬಿಡದಿರುವ ವಾಜಪೇಯಿ ಅವರ ನಿರ್ಧಾರ ದುರಾದೃಷ್ಟಕರ ಎಂದರು. ಕೇಂದ್ರ ಸಂಪುಟದಲ್ಲಿ ರೈಲ್ವೆ ಖಾತೆ ಹೊಂದಿರುವ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿಶ್ಚಯಿಸಿದ್ದಾರೆ. ಕಾಂಗ್ರೆಸ್‌ನೊಂದಿಗೆ ತೃಣಮೂಲ ಕಾಂಗ್ರೆಸ್ ಕೈ ಜೋಡಿಸುವ ಯಾವುದೇ ಸಾಧ್ಯತೆಗಳನ್ನು ಮಮತಾ ನಿರಾಕರಿಸಿದ್ದಾರೆ.
ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರಜಾ ಸತ್ತಾತ್ಮಕ ಒಕ್ಕೂಟದಿಂದ ಹೊರ ಬರುತ್ತಿರುವ ಎರಡನೇ ಪಕ್ಷ ತೃಣಮೂಲ ಕಾಂಗ್ರೆಸ್ಸಾಗಿದೆ. ಇತ್ತೀಚೆಗಷ್ಟೇ ಪ್ರಜಾ ಸತ್ತಾತ್ಮಕ ಒಕ್ಕೂಟದಿಂದ ಪಿಎಂಕೆ ಪಕ್ಷ ಯಾವುದೇ ಕಾರಣ ನೀಡದೆ ಹೊರಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
ಜೇಟ್ಲಿ ರಾಜೀನಾಮೆ : ತೆಹಲ್ಕಾ ಡಾಟ್ ಕಾಂ ಬಯಲು ಮಾಡಿರುವ ವಂಚನೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಸಮತಾ ಪಕ್ಷದ ಅಧ್ಯಕ್ಷೆ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಸುದ್ದಿಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ಜೇಟ್ಲಿ , ಪ್ರಸಕ್ತ ಪಕ್ಷದ ಉಪಾಧ್ಯಕ್ಷರಾಗಿರುವ ವಿ. ಕೃಷ್ಣರಾವ್ ಸಮತಾ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವರು ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications