ಕೈ ಕಚ್ಚಿದ ಕೃಷಿ, ಉತ್ತರ ಕರ್ನಾಟಕದ ಮತ್ತಿಬ್ಬರು ರೈತರ ಆತ್ಮಹತ್ಯೆ
ಹುಬ್ಬಳ್ಳಿ : ಸಾಲದ ಶೂಲದಿಂದ ಕಂಗೆಟ್ಟು ಧಾರವಾಡ ಜಿಲ್ಲೆಯ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರೊಂದಿಗೆ ಕೃಷಿ ಕೈ ಕಚ್ಚಿ ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ರೈತರ ಸಂಖ್ಯೆ 6 ಕ್ಕೇರಿದೆ.
ಶಿವಲಿಂಗಪ್ಪ ಬಂಟಾಳ್ (35) ಎನ್ನುವ ರೈತ ವಿಷ ಕುಡಿದು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಡವಾಗಿ ಬಂದಿರುವ ಪೊಲೀಸ್ ವರದಿಗಳು ತಿಳಿಸಿವೆ. ಮೂರು ವರ್ಷಗಳ ಹಿಂದೆ ಬ್ಯಾಂಕ್ನಿಂದ ಸಾಲ ಪಡೆದಿದ್ದ ಶಿವಲಿಂಗಪ್ಪ , ಸತತವಾಗಿ ಬೆಳೆ ಕೈ ಕೊಟ್ಟಿದ್ದರಿಂದ ಸಾಲ ಪಾವತಿಸಲು ವಿಫಲನಾಗಿದ್ದ . ಆಸ್ತಿ ಜಫ್ತಿ ಮಾಡುವುದಾಗಿ ಬ್ಯಾಂಕ್ ಅಧಿಕಾರಿಗಳು ಶಿವಲಿಂಗಪ್ಪನಿಗೆ ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಕಂಗೆಟ್ಟ ಶಿವಲಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಬಳ್ಳಾರಿಯ ದಮ್ಮೂರಿನಲ್ಲಿ ರೈತನ ಆತ್ಮಹತ್ಯೆ: ಮೆಕ್ಕೆ ಜೋಳ ಹಾಗೂ ಮೆಣಸಿನಕಾಯಿ ದರಗಳು ಮಾರುಕಟ್ಟೆಯಲಿ ತೀವ್ರ ಕುಸಿತ ಕಂಡಿದ್ದರಿಂದ ಬೇಸತ್ತ ಶೇಷರೆಡ್ಡಿ ಎನ್ನುವ ರೈತ (45) ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಳ್ಳಾರಿ ಪೊಲೀಸ್ ವರದಿಗಳು ತಿಳಿಸಿವೆ. ಶೇಷರೆಡ್ಡಿ ಕೂಡ ಕೋ ಆಪರೇಟಿವ್ ಸೊಸೈಟಿ ಹಾಗೂ ಬ್ಯಾಂಕ್ನಿಂದ ಸಾಲ ಪಡೆದಿದ್ದ.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications