Get Updates
Get notified of breaking news, exclusive insights, and must-see stories!

ಶುಕ್ರವಾರ ರಾತ್ರಿ 7.30 ಕ್ಕೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ : ತೆಹಲ್ಕಾ ಡಾಟ್‌ ಕಾಂ ಬಯಲು ಮಾಡಿರುವ ರಕ್ಷಣಾ ಅವ್ಯವಹಾರಗಳ ಹಿನ್ನೆಲೆಯಲ್ಲಿ ಉಂಟಾಗಿರುವ ಪರಿಸ್ಥಿತಿ ಕುರಿತು ಪ್ರಧಾನಿ ವಾಜಪೇಯಿ ಶುಕ್ರವಾರ ರಾತ್ರಿ 7.30 ಕ್ಕೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವರು.

ಅದಕ್ಕೂ ಮುನ್ನ ಸಂಜೆ 7 ಕ್ಕೆ ಸಂಪುಟ ಸಭೆಯನ್ನು ಕರೆದಿರುವ ವಾಜಪೇಯಿ, ಬಿಕ್ಕಟ್ಟಿನ ಕುರಿತು ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸುವರು. ಈ ನಡುವೆ ಪ್ರಜಾ ಸತ್ತಾತ್ಮಕ ಒಕ್ಕೂಟದ ಸಭೆ ಕೂಡ ದೆಹಲಿಯಲ್ಲಿ ನಡೆಯುತ್ತಿದ್ದು , ಕಳೆದ ಎರಡು ದಿನಗಳಲ್ಲಿ ನಡೆಯುತ್ತಿರುವ ಎರಡನೇ ಸಭೆ ಇದಾಗಿದೆ.

ತೃಣಮೂಲ ಕಾಂಗ್ರೆಸ್‌ ಬೆಂಬಲ ವಾಪಸ್ಸು , ಸಮತಾ ಪಕ್ಷದ ಸಚಿವರ ಸಾಮೂಹಿಕ ರಾಜೀನಾಮೆಯಿಂದಾಗಿ ವಾಜಪೇಯಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ರಕ್ಷಣಾ ಒಪ್ಪಂದಗಳ ಅವ್ಯವಹಾರಗಳ ಹಿನ್ನೆಲೆಯಲ್ಲಿ ವಾಜಪೇಯಿ ಸರ್ಕಾರ ಕೆಳಗಿಳಿಯಬೇಕೆಂದು ಆಗ್ರಹಿಸುತ್ತಿರುವ ವಿರೋಧ ಪಕ್ಷಗಳು ಶುಕ್ರವಾರವೂ ತಮ್ಮ ಪಟ್ಟನ್ನು ಸಡಿಲಿಸಿಲ್ಲ .

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+