ತೆಹಲ್ಕಾ ಪ್ರಕರಣ : ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ರಾಜೀನಾಮೆ
ನವದೆಹಲಿ : ತೆಹಲ್ಕಾ ಡಾಟ್ ಕಾಮ್, ರಕ್ಷಣಾ ವ್ಯವಹಾರಕ್ಕೆ ಸಂಬಂಧಿಸಿದ ಹಗರಣವನ್ನು ಬಹಿರಂಗಗೊಳಿಸಿದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ರಾಜೀನಾಮೆಗೆ ಒತ್ತಾಯಿಸಿ ಮಮತಾ ಬ್ಯಾನರ್ಜಿ ಎನ್ಡಿಎ ಸರಕಾರಕ್ಕೆ ಬೆಂಬಲ ವಾಪಾಸು ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಜಾರ್ಜ್ ಫರ್ನಾಂಡಿಸ್ ರಾಜೀನಾಮೆ ನೀಡಿದ್ದಾರೆ.
ಫರ್ನಾಂಡಿಸ್ ರಾಜೀನಾಮೆ ನೀಡಿದ ಮರುಗಳಿಗೆಯಲ್ಲೇ ಸಮತಾ ಪಕ್ಷಕ್ಕೆ ಸೇರಿದ ಸಚಿವರಾದ, ಕೃಷಿ ಸಚಿವ ನಿತೇಶ್ ಕುಮಾರ್, ರೈಲ್ವೇ ಖಾತೆ ರಾಜ್ಯ ಸಚಿವ ದಿಗ್ವಿಜಯ್ ಸಿಂಗ್ ಮತ್ತು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರೂ ತಮ್ಮ ರಾಜೀನಾಮೆ ಪತ್ರಗಳನ್ನು ಪ್ರಧಾನಿ ವಾಜಪೇಯಿ ಅವರಿಗೆ ಸಲ್ಲಿಸಿದ್ದಾರೆ. ಆದರೆ ಈ ಮೂವರ ರಾಜೀನಾಮೆ ಅಂಗೀಕಾರವಾಗಿಲ್ಲ. ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆದು ಫರ್ನಾಂಡಿಸ್ ದೋಷ ಮುಕ್ತರಾಗುವವರೆಗೆ ತಾವು ರಾಜೀನಾಮೆ ವಾಪಾಸು ಪಡೆಯುವುದಿಲ್ಲ ಎಂದು ಮೂವರೂ ಪಟ್ಟು ಹಿಡಿದಿದ್ದಾರೆ.
ಜಾರ್ಜ್ ಫರ್ನಾಂಡಿಸ್, ಅಜಿತ್ ಪಾಂಜಾ ಮತ್ತು ಮಮತಾ ಅವರ ರಾಜೀನಾಮೆ ಪತ್ರಗಳನ್ನು ಪ್ರಧಾನಿ ಅಂಗೀಕರಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications