ಧರ್ಮಸ್ಥಳದಲ್ಲಿ ಏಪ್ರಿಲ್ 28ರಂದು ಉಚಿತ ಸಾಮೂಹಿಕ ವಿವಾಹ
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಏಪ್ರಿಲ್ 28ರಂದು ಸಂಜೆ 6-50ಕ್ಕೆ ಗೋಧೂಳಿ ಲಗ್ನದಲ್ಲಿ ಈ ಉಚಿತ ವಿವಾಹ ಮಹೋತ್ಸವ ಜರುಗಲಿದೆ. ಕಳೆದ 30 ವರ್ಷಗಳಿಂದಲೂ ಧರ್ಮಸ್ಥಳದ ಧರ್ಮಾಧಿಕಾರಿಗಳು ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನಡೆಸುತ್ತಾ ಬಂದಿದ್ದಾರೆ.
ಈ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ದಿನಾಂಕ 24-4-2001ರೊಳಗಾಗಿ ವಧೂವರರ ಹೆಸರುಗಳನ್ನು ದಾಖಲು ಮಾಡಿಸಬೇಕು. ನೊಂದಣಿಯ ಕಾಲದಲ್ಲಿ ಕಡ್ಡಾಯವಾಗಿ ತಮ್ಮ ಊರಿನ ಮಂಡಲ ಪಂಚಾಯಿತಿ ಆಡಳಿತಾಧಿಕಾರಿ ಇಲ್ಲವೇ ಕಾರ್ಯದರ್ಶಿಯವರಿಂದ ವಧೂವರರ ಹೆಸರು, ಅವರ ವಯಸ್ಸು, ಹಿರಿಯರ ಒಪ್ಪಿಗೆ ಹಾಗೂ ಅವಿವಾಹಿತ ಎಂಬುದನ್ನು ದೃಢ ಪಡಿಸುವ ಪತ್ರವನ್ನು ತರಬೇಕು.
ಶ್ರೀಕ್ಷೇತ್ರದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಉಚಿತ ವಿವಾಹ ಮಹೋತ್ಸವ ಸಂದರ್ಭದಲ್ಲಿ ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ ಮತ್ತು ಮಂಗಳಸೂತ್ರವನ್ನು ಉಚಿತವಾಗಿ ನೀಡಲಾಗುವುದು. ವಧೂವರರಿಬ್ಬರ ಕಡೆಯಿಂದ ಒಟ್ಟು ಹತ್ತು ಜನ ಬಂಧುಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಯನ್ನು ಶ್ರೀಕ್ಷೇತ್ರದ ಸಾಮೂಹಿಕ ವಿವಾಹ ನೋಂದಣಿ ಕಚೇರಿಯಿಂದ ಪಡೆಯಬಹುದು ಎಂದು ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗಡೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications