ವಿಶ್ವಾಸ ಮತ ಯಾಚನೆಗೆ ವಾಜಪೇಯಿ ನಿರ್ಧಾರ
ನವದೆಹಲಿ : ರಕ್ಷಣಾ ಹಗರಣದ ಆರೋಪದ ಹಿನ್ನೆಲೆಯಲ್ಲಿ ಎನ್‌ಡಿಎ ಸರ್ಕಾರ ಬರುವ ವಾರ ಸಂಸತ್ತಿನಲ್ಲಿ ವಿಶ್ವಾಸ ಮತ ಯಾಚಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಹೊರನಡೆದಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಎನ್‌ಡಿಎ ಪ್ರಮುಖ ಅಂಗ ಪಕ್ಷ ತೆಲುಗು ದೇಶಂನೊಂದಿಗೆ ಚರ್ಚಿಸಿ ವಿಶ್ವಾಸ ಮತ ಯಾಚನೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಶುಕ್ರವಾರ 2 ತಾಸಿಗೂ ಹೆಚ್ಚು ಕಾಲ ನಡೆದ ಎನ್‌ಡಿಎ ಸಭೆಯಲ್ಲಿ ಈ ವಿಷಯದ ವಾಸನೆ ಬಡಿಯಿತು.
ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ : ಸುಪ್ರಿಂಕೋರ್ಟಿನ ಹಾಲಿ ನ್ಯಾಯಾಧೀಶರೊಬ್ಬರಿಂದ ರಕ್ಷಣಾ ಹಗರಣ ಕುರಿತಂತೆ ಸಮಗ್ರ ತನಿಖೆ ನಡೆಸಲು ಸಭೆ ಅನುಮೋದಿಸಿತು . ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಿಸುವಂತೆ ಪ್ರಧಾನಿ ವಾಜಪೇಯಿ, ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಆನಂದ್ ಅವರನ್ನು ಕೋರಲಿದ್ದಾರೆ. ತೃಣಮೂಲ ಕಾಂಗ್ರೆಸ್‌ನೊಂದಿಗೆ ಯಾವುದೇ ಮಾತುಕತೆ ನಡೆಸಕೂಡದು ಎಂದು ತೀರ್ಮಾನಿಸಲಾಯಿತು. ರಾಜೀನಾಮೆ ಕೊಟ್ಟಿರುವ ಸಮತಾ ಪಕ್ಷದ ಸಚಿವರು ತಮ್ಮ ಪಟ್ಟು ಸಡಿಲಿಸುವಂತೆ ಮನವೊಲಿಸಬೇಕೆಂದು ಜಾರ್ಜ್ ಫರ್ನಾಂಡಿಸ್ ಅವರಲ್ಲಿ ಪ್ರಧಾನಿ ಮನವಿ ಮಾಡಿಕೊಂಡಿದ್ದಾರೆ ಎಂದು ರಾಸಾಯನಿಕ ಮತ್ತು ಕೀಟನಾಶಕಗಳ ಖಾತೆ ಸಚಿವ ಸುಖದೇವ್ ಸಿಂಗ್ ಧಿಂಡ್ಸಾ ಹೇಳಿದರು.
ಜಾರ್ಜ್ ಇನ್ನು ಎನ್‌ಡಿಎ ಸಂಚಾಲಕ : ಪ್ರಧಾನಿ ಕಚೇರಿಯ ಯಾವುದೇ ಅಧಿಕಾರಿ ರಾಜೀನಾಮೆ ಕೊಡಕೂಡದು. ಈ ಆರೋಪದ ಬಗ್ಗೆ ಇನ್ನು 6 ತಿಂಗಳಲ್ಲಿ ತನಿಖೆ ಮುಗಿಯಲಿದೆ. ಜಾರ್ಜ್ ಫರ್ನಾಂಡಿಸ್ ಅವರು ನಿರ್ದೋಷಿ ಅನ್ನುವುದೇ ಎನ್‌ಡಿಎ ನಂಬುಗೆ. ಅವರು ನಿರ್ದೋಷಿ ಎಂಬುದು ಸಾಬೀತಾದ ತಕ್ಷಣ ಮತ್ತೆ ಸಚಿವರಾಗಿ ಸರ್ಕಾರಕ್ಕೆ ಸೇರಿಸಿಕೊಳ್ಳಲಾಗುವುದು. ಆವರೆಗೆ ಅವರು ಎನ್‌ಡಿಎ ಸಂಚಾಲಕರಾಗಿ ಕಾರ್ಯ ನಿರ್ವಹಿಸಬೇಕೆಂದು ಸಭೆ ತೀರ್ಮಾನಿಸಿತು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಮೋದ್ ಮಹಾಜನ್ ಹೇಳಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications