ನಗರದ ಎಲ್ಲ ಹೋಟೆಲ್‌ಗಳಲ್ಲಿ ಬಿಸಿನೀರು ನೀಡಲು ಆದೇಶ
ಬೆಂಗಳೂರು : ಬೆಂಗಳೂರು ನಗರದಲ್ಲಿ ಕರುಳುಬೇನೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಎಲ್ಲ ಹೋಟೆಲ್‌ಗಳಲ್ಲಿ ಸಾರ್ವಜನಿಕರಿಗೆ ಕಡ್ಡಾಯವಾಗಿ ಬಿಸಿನೀರು ಕೊಡುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಆದೇಶ ನೀಡಿದೆ.
ನಗರದ ಎಲ್ಲ ಹೋಟೆಲ್‌ಗಳಲ್ಲಿ ಬಿಸಿನೀರು ದೊರೆಯುತ್ತದೆ ಎಂಬ ಫಲಕ ಹಾಕಬೇಕು ಹಾಗೂ ಬಿಸಿನೀರನ್ನೇ ಸರಬರಾಜು ಮಾಡಬೇಕು. ಇಲ್ಲವಾದಲ್ಲಿ ಅಂತಹ ಹೋಟೆಲ್‌ಗಳನ್ನು ಮುಚ್ಚಲಾಗುವುದು ಎಂದು ಸ್ಥಾಯಿ ಸಮಿತಿಯ ಅಧ್ಯಕ್ಷ ಎಸ್. ಶಿವಪ್ಪ ಎಚ್ಚರಿಕೆಯನ್ನು ನೀಡಿದ್ದಾರೆ.
ಸ್ಥಾಯಿ ಸಮಿತಿಯು ನಗರದ ಹೋಟೆಲ್‌ಗಳಲ್ಲಿನ ಸ್ವಚ್ಚತೆ ಹಾಗೂ ನೈರ್ಮಲ್ಯದ ಬಗ್ಗೆ ತಪಾಸಣೆ ನಡೆಸಿದಾಗ, ಜಯನಗರದ ವಾಣಿಜ್ಯ ಸಂಕೀರ್ಣದಲ್ಲಿ ಹೋಟೆಲ್ ಒಂದು ಅನಧಿಕೃತವಾಗಿ ಹೊರಭಾಗದಲ್ಲಿ ಟೇಬಲ್ ಹಾಕಿ ಅಲ್ಲಿಯೂ ಊಟ ತಿಂಡಿ ಸರಬರಾಜು ಮಾಡುತ್ತಿದ್ದುದನ್ನು ಗಮನಿಸಿ, ಶುಚಿತ್ವದ ದೃಷ್ಟಿಯಿಂದ ಆ ಹೋಟೆಲ್‌ನ ಪರವಾನಗಿ ನವೀಕರಿಸದಂತೆ ಸೂಚನೆ ನೀಡಲಾಗಿದೆ ಎಂದರು.
ಕೋಳಿ ಮಾಂಸದ ಜತೆ ದನದ ಮಾಂಸವನ್ನೂ ಬೆರೆಸಿ ಮಾರಾಟ ಮಾಡುತ್ತಿದ್ದ ಫ್ರೆಜರ್‌ಟೌನ್‌ನ ಫಿಜಾ ಡಿಲೈಟ್ ಎಂಬ ಅನಧಿಕೃತ ಹೋಟೆಲ್ ಮುಚ್ಚುವಂತೆ ಆದೇಶ ನೀಡಲಾಗಿದೆ ಎಂದೂ ಅವರು ತಿಳಿಸಿದರು. ನಗರದ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಎಲ್ಲ ಹೋಟೆಲ್‌ಗಳಲ್ಲೂ ಶುಚಿತ್ವ ಕಾಪಾಡುವಂತೆ ಹಾಗೂ ಬಿಸಿನೀರನ್ನೇ ನೀಡುವಂತೆ ಸೂಚಿಸಲಾಗಿದೆ. ಆದೇಶ ಉಲ್ಲಂಘಿಸಿದರೆ, ನಿರ್ದಾಕ್ಷಿಣ್ಯವಾಗಿ ಹೋಟೆಲ್‌ಗಳ ಬಾಗಿಲು ಮುಚ್ಚಿಸಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications