ಕೋಲಾರ ಚಿನ್ನದ ಗಣಿ ಮುಚ್ಚದಂತೆ ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು : ನೂರು ವರ್ಷಗಳಷ್ಟು ಹಳೆಯದಾದ ಕೋಲಾರ ಚಿನ್ನದ ಗಣಿಯನ್ನು ಮುಚ್ಚಕೂಡದು ಎಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪಾರ ನಷ್ಟವನ್ನು ಅನುಭವಿಸುತ್ತಿರುವ ಕೆ.ಜಿ.ಎಫ್‌ನ ಚಿನ್ನದ ಗಣಿಯನ್ನು ಮುಚ್ಚಲು ಕೇಂದ್ರ ಸರಕಾರ ಜನವರಿ 29ರಂದು ಹೊರಡಿಸಿದ್ದ ಆದೇಶ ರದ್ದುಗೊಳಿಸಿರುವ ರಾಜ್ಯ ಹೈಕೋರ್ಟ್, ಗಣಿಯ ಪುನಶ್ಚೇತನದ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ಕೇಂದ್ರಕ್ಕೆ ಸೂಚಿಸಿದೆ.
ಚಿನ್ನದ ಗಣಿ ಮುಚ್ಚುವಂತೆ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿ ಭಾರತ್ ಗೋಲ್ಡ್ ಮೈನ್ಸ್ ಕಾರ್ಮಿಕರ ಸಂಘ ನ್ಯಾಯಾಲಯದ ಮೊರೆ ಹೋಗಿತ್ತು. ಸಂಘ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದ ನ್ಯಾಯಮೂರ್ತಿ ಎಚ್.ಎನ್. ನಾರಾಯಣ ಅವರು ಶುಕ್ರವಾರ ಈ ಮಹತ್ವದ ತೀರ್ಪು ನೀಡಿದ್ದಾರೆ.
ಕೇಂದ್ರ ಕೈಗಾರಿಕಾ ಮತ್ತು ಹಣಕಾಸು ನಿಗಮ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲೇ ಕೋಲಾರ ಚಿನ್ನದ ಗಣಿಯನ್ನು ರೋಗಗ್ರಸ್ತ ಕಾರ್ಖಾನೆ ಎಂದು ಘೋಷಿಸಿ, ಗಣಿ ಮುಚ್ಚುವಂತೆ ಮಾಡಿದ್ದ ಆದೇಶಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿರುವ ನ್ಯಾಯಾಲಯವು, ಗಣಿಯ ಪುನಶ್ಚೇತನಕ್ಕೆ ದಾರಿ ಹುಡುಕಲು ನಿಗಮಕ್ಕೂ ಸೂಚಿಸಿದೆ.
ಆದರೆ, ಕಾರ್ಮಿಕರ ಸ್ವಯಂ ನಿವೃತ್ತಿ ಯೋಜನೆ ಸಂಬಂಧ ಆಡಳಿತ ಮಂಡಳಿ ಹೊರಡಿಸಿರುವ ಆದೇಶವನ್ನು ರದ್ದು ಪಡಿಸುವಂತೆ ಕೋರಿದ್ದ ಅರ್ಜಿದಾರರ ಮನವಿಯನ್ನು ಮಾತ್ರ ನ್ಯಾಯಾಲಯ ತಿರಸ್ಕರಿಸಿದೆ. ಸ್ವಯಂ ನಿವೃತ್ತಿ ಯೋಜನೆ ಕೇಂದ್ರದ ವಿವೇಚನೆಗೆ ಒಳಪಟ್ಟಿದ್ದು, ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದಿದೆ.
ಸುಮಾರು 75 ಪುಟಗಳ ಸುದೀರ್ಘ ತೀರ್ಪಿನಲ್ಲಿ ನ್ಯಾಯಾಲಯವು ಕೇಂದ್ರ ಸರಕಾರ ಅಥವಾ ನಿಗಮ ಗಣಿಯ ಪುನಶ್ಚೇತನಕ್ಕೆ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications