ಅರಸೀಕೆರೆ ತಾ. ಜಾಜೂರಿನಲ್ಲಿ 110 ಕೆ.ವಿ. ವಿದ್ಯುತ್ ಕೇಂದ್ರ ಸ್ಥಾಪನೆ
ಹಾಸನ : ಅರಸೀಕೆರೆ ತಾಲೂಕಿನ ಜಾಜೂರಿನಲ್ಲಿ 110 ಕೆ.ವಿ. ವಿದ್ಯುತ್ ಕೇಂದ್ರ ಹಾಗೂ ತಾಲೂಕಿನಲ್ಲಿ ನಾಲ್ಕು ಮರು ಪ್ರಸರಣ ಕೇಂದ್ರ ಸ್ಥಾಪನೆಗೆ ರಾಜ್ಯ ಸರಕಾರ ಮಂಜೂರಾತಿ ನೀಡಿದೆ. ಈ ಕೇಂದ್ರ ಸ್ಥಾಪನೆಗೆ 28 ಕೋಟಿ ರುಪಾಯಿ ವೆಚ್ಚ ತಗುಲಲಿದೆ. ಈ ವಿಷಯವನ್ನು ಅರಸೀಕೆರೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಹಾಯಕ ಎಂಜಿನಿಯರ್ ಉದಯ್ಕುಮಾರ್ ತಿಳಿಸಿದ್ದಾರೆ.
ತಾಲೂಕಿನ ಜಾಜೂರು ಬಳಿ 110 ಕಿಲೋ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು 20 ಕೋಟಿ ರುಪಾಯಿಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು, ಅಲ್ಲದೆ ತಲಾ ಎರಡು ಕೋಟಿ ರುಪಾಯಿ ವೆಚ್ಚದಲ್ಲಿ ನಾಲ್ಕು ಮರು ಪ್ರಸರಣ ಕೇಂದ್ರ ಸ್ಥಾಪಿಸಲು ಸರಕಾರ ಒಪ್ಪಿಗೆ ನೀಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
ಬೆಳಗುಂಬ, ಗೇರುಮರ, ಬಸವಘಟ್ಟ ಹಾಗೂ ಗೊಂಡೆನಾಳುಗಳಲ್ಲಿ ಮರು ಪ್ರಸರಣ ಕೇಂದ್ರ ಸ್ಥಾಪಿಸಲಾಗುವುದು ಎಂದೂ ಅವರು ಹೇಳಿದರು. ಬೇಸಿಗೆಯಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ವೋಲ್ಟೇಜ್ ಏರಿಳಿತ ಇದ್ದೇ ಇರುತ್ತದೆ. ಇದನ್ನು ಅರಿತು ರೈತರು ಹಾಗೂ ನಾಗರಿಕರು ನಿಗಮದ ಜತೆ ಸಹಕರಿಸಬೇಕು ಎಂದೂ ಅವರು ಮನವಿ ಮಾಡಿದರು. ಜಾವಗಲ್ ಮರು ಪ್ರಸರಣ ಕೇಂದ್ರ ಪ್ರಾರಂಭವಾದ ಬಳಿಕ ತಾಲೂಕಿನ ವಿದ್ಯುತ್ ಸಮಸ್ಯೆ ಕೊಂಚ ನೀಗಲಿದೆ ಎಂದೂ ಅವರು ಹೇಳಿದರು.
(ಹಾಸನ ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications