ಮತ್ತೆ ಮಿಂಚಿದ ವಿ.ವಿ.ಎಸ್. ಲಕ್ಷ್ಮಣ್, ಶತಕದ ಹೊಸ್ತಿಲಲ್ಲಿ ದಾಸ್
ಚೆನ್ನೈ : ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 3ನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದ ಮೇಲೆ ಗಂಗೂಲಿ ನೇತೃತ್ವದ ಭಾರತ ತಂಡ ಸಂಪೂರ್ಣ ಹಿಡಿತ ಸಾಧಿಸಿದೆ. ಎರಡನೇ ದಿನದ ಆಟದ ಮುಕ್ತಾಯಕ್ಕೆ ಭಾರತ ಒಂದು ವಿಕೆಟ್ ಕಳೆದುಕೊಂಡು 211 ರನ್ ಗಳಿಸುವ ಮೂಲಕ ದಿಟ್ಟ ಉತ್ತರ ಕೊಟ್ಟಿದೆ.
ಅದ್ಭುತ ಹೊಡೆತಗಳ ಮೂಲಕ 185 ಚೆಂಡುಗಳನ್ನೆದುರಿಸಿ 84ರನ್ ಗಳಿಸಿರುವ ದಾಸ್ ಹಾಗೂ ಕೊಲ್ಕತ್ತಾ ಟೆಸ್ಟ್‌ನ ಹೀರೋ ವಿ.ವಿ.ಎಸ್. ಲಕ್ಷ್ಮಣ್ 69 ಚೆಂಡುಗಳಲ್ಲಿ 59 ರನ್ ಗಳಿಸಿ ಆಡುತ್ತಿದ್ದು, ಭಾರತ ಉತ್ತಮ ಮೊತ್ತ ಕಲೆಹಾಕುವ ಸುಳಿವು ನೀಡಿದ್ದಾರೆ. ಇದಕ್ಕೂ ಮೊದಲು ದಾಸ್ ಜತೆ ಆಟ ಆರಂಭಿಸಿದ ರಮೇಶ್ (61) ಭಾರತಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು.
ರಮೇಶ್ ಕೆಟ್ಟ ಹೊಡೆತಕ್ಕೆ ಯತ್ನಿಸಿ ವಾರ್ನ್‌ಗೆ ವಿಕೆಟ್ ಒಪ್ಪಿಸಿದ ಬಳಿಕ ದಾಸ್ ಜತೆಗೂಡಿದ ವಿವಿಎಸ್. ಲಕ್ಷ್ಮಣ್ ಏಕದಿನದ ಪಂದ್ಯಗಳಲ್ಲಿ ಆಡುವ ರೀತಿಯಲ್ಲಿ ಬ್ಯಾಟಿಂಗ್ ಆರಂಭಿಸಿ, ಕ್ರೀಡಾಂಗಣದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿ, ಆಸ್ಟ್ರೇಲಿಯಾ ಬೌಲರ್‌ಗಳಿಗೆ ಬೆವರು ಇಳಿಸಿದರು. ಈ ಇಬ್ಬರ ಜೊತೆಯಾಟ ಬೇರ್ಪಡಿಸಲು ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ವಾ ಮಾಡಿದ ಎಲ್ಲ ಪ್ರಯತ್ನಗಳೂ ವಿಫಲವಾದವು. ಶತಕದ ಸಮೀಪ ಇರುವ ದಾಸ್ ಆತ್ಮವಿಶ್ವಾಸದಿಂದ ಆಡುತ್ತಿದ್ದಾರೆ.
ಕೇವಲ ಒಂದು ವಿಕೆಟ್ ಕಳೆದುಕೊಂಡು 211 ರನ್ ಗಳಿಸಿರುವ ಭಾರತಕ್ಕೆ ಆಸ್ಟ್ರೇಲಿಯಾ ಸವಾಲನ್ನು ಸರಿಗಟ್ಟಲು ಇನ್ನು ಕೇವಲ 180ರನ್‌ಗಳು ಮಾತ್ರ ಬೇಕು. ಸತತ 16 ಟೆಸ್ಟ್ ಗೆಲುವಿನ ದಾಖಲೆ ಮಾಡಿದ್ದ ಆಸ್ಟ್ರೇಲಿಯಾವನ್ನು ಎರಡನೇ ಟೆಸ್ಟ್‌ನಲ್ಲಿ ಮಣಿಸಿದ ಭಾರತ ಈ ಪಂದ್ಯವನ್ನೂ ಗೆಲ್ಲುವ ಮೂಲಕ ಸರಣಿ ಗೆದ್ದು ಇತಿಹಾಸ ನಿರ್ಮಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ.
ಭಾರತ ಪರ ಇನ್ನೂ ಖ್ಯಾತನಾಮರಾದ ಸಚಿನ್ ತೆಂಡೂಲ್ಕರ್, ಗಂಗೂಲಿ, ದ್ರಾವಿಡ್ ಆಡಬೇಕಿದ್ದು, ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಮುನ್ನಡೆ ಗಳಿಸಿ ಆಸ್ಟ್ರೇಲಿಯಾ ಮೇಲೆ ಒತ್ತಡ ಹೇರಲು ನಿರ್ಧರಿಸಿದೆ. ಪಂದ್ಯ ಇನ್ನೂ ಮೂರು ದಿನ ಬಾಕಿ ಇದ್ದು, ಈ ಪಂದ್ಯವೂ ಫಲಿತಾಂಶ ನೀಡುವ ಸಾಧ್ಯತೆ ಇದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications