ಒಂದು ದಿನದ ಪಂದ್ಯಕ್ಕೆ ಸುನೀಲ್ ಜೋಶಿ, ಜಾವಗಲ್ ಶ್ರೀನಾಥ್
ಚೆನ್ನೈ : ಆಸ್ಟ್ರೇಲಿಯಾ ವಿರುದ್ಧದ ಮೊದಲ ಮೂರು ಅಂತರರಾಷ್ಟ್ರೀಯ ಪಂದ್ಯಗಳಿಗೆ ಭಾರತ ಕ್ರಿಕೆಟ್ ತಂಡವನ್ನು ಭಾನುವಾರ ಪ್ರಕಟಿಸಲಾಗಿದ್ದು, ಟೆಸ್ಟ್ ಕ್ರಿಕೆಟ್ನಲ್ಲಿ ಅವಕಾಶ ವಂಚಿತರಾಗಿದ್ದ ಕರ್ನಾಟಕದ ಸುನೀಲ್ ಜೋಶಿ ಒಂದು ದಿನದ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಂಕಟೇಶ್ ಪ್ರಸಾದ್ ಆಯ್ಕೆದಾರರ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಲಕ್ಷ್ಮಣ್ ಹಾಗೂ ಹರ್ಭಜನ್ ಸಿಂಗ್ ತಂಡಕ್ಕೆ ಮರಳಿದ್ದಾರೆ. ದೇಶೀ ಕ್ರಿಕೆಟ್ನಲ್ಲಿ ಉತ್ತಮ ನಿರ್ವಹಣೆ ತೋರಿದ ದಿನೇಶ್ ಮೊಂಗಿಯಾರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆಯ್ಕೆ ಸಮಿತಿ ಅಧ್ಯಕ್ಷ ಚಂದೂ ಬೋರ್ಡೆ ಈ ವಿಷಯವನ್ನು ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
ಗಾಯಗೊಂಡಿರುವ ವೇಗದ ಬೌಲರ್ ಜಾವಗಲ್ ಶ್ರೀನಾಥ್ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ಅವರು ಸಂಪೂರ್ಣ ಚೇತರಿಸಿಕೊಳ್ಳಲಿದ್ದು , ಮೊದಲ ಮೂರು ಪಂದ್ಯಗಳಲ್ಲಿ ಆಡುವುದು ಬಹುತೇಕ ಖಚಿತ ಎಂದು ಚಂದೂ ಬೋರ್ಡೆ ತಿಳಿಸಿದರು. ಮಾರ್ಚ್ 25 ರಿಂದ ಸೀಮಿತ ಓವರ್ ಪಂದ್ಯಗಳು ಪ್ರಾರಂಭವಾಗಲಿವೆ.
ತಂಡ ಇಂತಿದೆ - ಸೌರವ್ ಗಂಗೂಲಿ (ನಾಯಕ), ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ಹೇಮಾಂಗ್ ಬದಾನಿ, ದಿನೇಶ್ ಮೊಂಗಿಯಾ, ವಿಜಯ್ ದಹಿಯ, ರಾಬಿನ್ ಸಿಂಗ್, ಸುನೀಲ್ ಜೋಶಿ, ಜಾವಗಲ್ ಶ್ರೀನಾಥ್, ಅಜಿತ್ ಅಗರ್ಕರ್, ಜಹೀರ್ ಖಾನ್, ಹರ್ಭಜನ್ ಸಿಂಗ್ ಹಾಗೂ ವೀರೇಂದ್ರ ಶೆವಾಗ್.
(ಇನ್ಫೋ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications