ರಾಜೀನಾಮೆ ವಾಪಸ್ಸು , ಪಟ್ಟು ಸಡಿಲಿಸಿದ ಜಾರ್ಜ್ ಹಿಂಬಾಲಕರು
ನವದೆಹಲಿ : ನಾಲ್ಕು ದಿನಗಳ ಬಿಕ್ಕಟ್ಟಿನ ನಂತರ ಪಟ್ಟು ಸಡಿಲಿಸಿರುವ ಸಮತಾ ಪಾರ್ಟಿಯ ನಿತೀಶ್ ಕುಮಾರ್, ದಿಗ್ವಿಜಯ್ ಸಿಂಗ್ ಹಾಗೂ ಶ್ರೀನಿವಾಸ ಪ್ರಸಾದ್ ಕೇಂದ್ರ ಸಂಪುಟಕ್ಕೆ ನೀಡಿದ್ದ ತಮ್ಮ ರಾಜೀನಾಮೆಯನ್ನು ವಾಪಸ್ಸು ಪಡೆದಿದ್ದಾರೆ.
ಸೋಮವಾರ ನಡೆದ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ರಾಜೀನಾಮೆ ವಾಪಸ್ಸು ಪಡೆಯುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಮತಾ ಪಕ್ಷದ ಎಲ್ಲಾ 13 ಸಂಸತ್ ಸದಸ್ಯರು ಭಾಗವಹಿಸಿದ್ದರು. ಸರ್ಕಾರವು ಸುರಳೀತವಾಗಿ ಮುನ್ನಡೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಯಿತು ಎಂದು ಪಕ್ಷದ ಅಧ್ಯಕ್ಷ ಜಾರ್ಜ್ ಫರ್ನಾಂಡಿಸ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ತೆಹಲ್ಕಾ ಡಾಟ್ ಕಾಂ ಬಯಲು ಮಾಡಿದ ರಕ್ಷಣಾ ಒಪ್ಪಂದಗಳಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ವಿರೋಧ ಪಕ್ಷಗಳ ಒತ್ತಾಯದ ಮೇರೆಗೆ ರಾಜೀನಾಮೆ ನೀಡಿದ್ದರು. ಜಾರ್ಜ್ ಅವರ ಹಾದಿಯನ್ನೇ ಅನುಸರಿಸಿದ ಪಕ್ಷದ ಇತರ ಮೂವರು ಸಚಿವರು ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿ, ತನಿಖೆ ಪೂರ್ಣವಾಗುವವರೆಗೆ ತಾವು ಸಂಪುಟದಲ್ಲಿ ಸೇರ್ಪಡೆಯಾಗುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಪ್ರಸ್ತುತ ಸಚಿವರ ರಾಜೀನಾಮೆ ವಾಪಸ್ಸಾತಿಯಿಂದ ಸರ್ಕಾರದಲ್ಲಿನ ಒಂದು ಹಂತದ ಬಿಕ್ಕಟ್ಟು ಬಗೆ ಹರಿದಂತಾಗಿದೆ.
(ಯುಎನ್ಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications