ಗುಲ್ಬರ್ಗಾದಲ್ಲಿ 40 ಡಿಗ್ರಿ ಮುಟ್ಟಿದ ಉಷ್ಣಾಂಶ
ಬೆಂಗಳೂರು : ಬೆಂಗಳೂರಿನಲ್ಲೂ ಬಿಸಿಲು ಏರುತ್ತಿದೆ. ಮಹಡಿಗಳ ಮೇಲೆ ಹಪ್ಪಳ, ಸಂಡಿಗೆ ಒಣಗುತ್ತಿದೆ. ವರ್ಷಕ್ಕೆ ಸಾಕಾಗುವಷ್ಟು ಬಾಳಕ, ಸಂಡಿಗೆಯ ತಯಾರಿಯಲ್ಲಿ ಮಾನಿನಿಯರು ನಿರತರಾಗಿದ್ದಾರೆ. ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.
ಗರಿಷ್ಠ ತಾಪಮಾನ ಹಲವು ಕಡೆಗಳಲ್ಲಿ ಸಾಮಾನ್ಯಮಟ್ಟಕ್ಕಿಂತ ಅಧಿಕವಾಗಿದೆ. ದಕ್ಷಿಣ ಒಳನಾಡಿನಲ್ಲಿ ತಾಪಮಾನ ಹೆಚ್ಚಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಅನೇಕ ಕಡೆಗಳಲ್ಲಿ ಸಾಮಾನ್ಯವಾಗಿದೆ. ಕನಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಕಂಡುಬಂದಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಕನಿಷ್ಠ ತಾಪಮಾನ ಕೂಡ ಅಧಿಕವಾಗಿದೆ.
ರಾಜ್ಯದ ಅತಿಹೆಚ್ಚು ತಾಪಮಾನ ಗುಲ್ಬರ್ಗಾದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅಂತೂ ಮಾರ್ಚ್ ತಿಂಗಳಿನಲ್ಲೇ ರಾಜ್ಯದ ತಾಪಮಾನ 40 ಗಡಿ ದಾಟಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ ಏರುವ ಎಲ್ಲ ಕುರುಹೂ ಇಂದೇ ಕಂಡುಬಂದಿದೆ. ರಾಜ್ಯದ ಅತಿ ಕಡಿಮೆ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಶಿವಮೊಗ್ಗದಲ್ಲಿತ್ತು.
ಮುನ್ಸೂಚನೆಯ ರೀತ್ಯ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಸ್ಥಳೀಯ ಹವಾಮಾನ ವೀಕ್ಷಣಾಲಯದ ವರದಿಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಭ್ರ ಆಕಾಶ ಇದ್ದು, ಗರಿಷ್ಠ ತಾಪಮಾನ 34 ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ತಲುಪುವ ಸೂಚನೆ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications