ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಈ ವರ್ಷ 7 ಲಕ್ಷ ಪರೀಕ್ಷಾರ್ಥಿಗಳು
ಬೆಂಗಳೂರು : ಮಾರ್ಚ್ 21ರ ಬುಧವಾರದಿಂದ ರಾಜ್ಯಾದ್ಯಂತ 1825 ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 7 ಲಕ್ಷದ 40 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಬಹಳ ವ್ಯವಸ್ಥಿತವಾಗಿ ಹಾಗೂ ಕಟ್ಟು ನಿಟ್ಟಾಗಿ ಪರೀಕ್ಷೆ ನಡೆಸಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ನಡೆಸಿದೆ.
ಪರೀಕ್ಷೆಗೆ ಕುಳಿತಿರುವ 7,40,000 ವಿದ್ಯಾರ್ಥಿಗಳ ಪೈಕಿ 11 ಸಾವಿರದ 600 ಮಂದಿ ಖಾಸಗಿ ವಿದ್ಯಾರ್ಥಿಗಳು, 5 ಲಕ್ಷದ 23 ಸಾವಿರ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹಾಗೂ 2 ಲಕ್ಷ ಪುನರಾವರ್ತನೆಯ ವಿದ್ಯಾರ್ಥಿಗಳು ಇದ್ದಾರೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಎಲ್ಲ ವಿದ್ಯಾರ್ಥಿಗಳಿಗೆ ಭಾವಚಿತ್ರ ಇರುವ ಪ್ರವೇಶ ಪತ್ರಗಳನ್ನು ಈಗಾಗಲೇ ವಿತರಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ಕಾಯಂ ಮೇಲ್ವಿಚಾರರು ಅಥವಾ ವೀಕ್ಷಕರನ್ನು ನಿಯೋಜಿಸಲಾಗುತ್ತಿದೆ. ಪರೀಕ್ಷೆಯ ಪ್ರಶ್ನೆಪತ್ರಿಕೆ ನೀಡುವುದರಿಂದ ಹಿಡಿದು, ಉತ್ತರ ಪತ್ರಿಕೆಗಳನ್ನು ಕಟ್ಟುಕಟ್ಟಿ ಪರೀಕ್ಷಾ ಮಂಡಳಿಯ ಸುಪರ್ದಿಗೆ ಒಪ್ಪಿಸುವ ತನಕ ಈ ವೀಕ್ಷಕರು ಜವಾಬ್ದಾರಿ ವಹಿಸಲಿದ್ದಾರೆ.
ವಿದ್ಯಾರ್ಥಿಗಳು ನಕಲು ಮಾಡದಂತೆ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷಾ ಅಕ್ರಮಗಳು ನಡೆಯದಂತೆ ಎಚ್ಚರ ವಹಿಸಲಾಗಿದೆ. ಇದಲ್ಲದೆ ಪರೀಕ್ಷಾ ಅಕ್ರಮ ಪತ್ತೆದಳದ ಸಿಬ್ಬಂದಿ ನಿಯಮಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ. ಪ್ರಶ್ನೆ ಪತ್ರಿಕೆ ಬಹಿರಂಗವಾಗದಂತೆ ಮಾಡಲು, ಪರೀಕ್ಷೆಗೆ ಹದಿನೈದು ನಿಮಿಷ ಮೊದಲು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಪತ್ರಿಕೆಯ ಬಂಡಲ್‌ಒಡೆಯಲಾಗುವುದು ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.
ಫಲಿತಾಂಶ : ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಮೇ 5ರಂದು ಪ್ರಕಟಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದ್ದು, ಮೇ 30ರೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲಾಗುವುದು ಎಂದೂ ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷೆಯು ಮಾರ್ಚ್ 21ರಿಂದ 28ರವರೆಗೆ ನಡೆಯಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications