ಸಂಸತ್ತಿನ ಘನತೆ ಎತ್ತಿ ಹಿಡಿಯಲು ವಿಶ್ವೇಶ ತೀರ್ಥ ಸ್ವಾಮೀಜಿ ಮನವಿ
ಉಡುಪಿ : ತೆಹಲ್ಕಾ ಬಯಲು ಮಾಡಿದ ಹಗರಣದ ಹಿನ್ನೆಲೆಯಲ್ಲಿ ಸಂಸ್ತತಿನ ಹೊರಗೆ ಸದ್ದು ಮಾಡುತ್ತಿರುವ ವಿರೋಧ ಪಕ್ಷದ ಸದಸ್ಯರು ಸದನದಲ್ಲಿ ಭಾಗವಹಿಸುವ ಮೂಲಕ ಸಂಸತ್ತಿನ ಘನತೆಯನ್ನು ಎತ್ತಿ ಹಿಡಿಯಬೇಕೆಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸಂಸತ್ ಸದ್ಯಸರಲ್ಲಿ ಮನವಿ ಮಾಡಿದ್ದಾರೆ.
ಸದನದ ಘನತೆಯನ್ನು ಕಾಪಾಡುವುದು ಸದಸ್ಯರ ಕರ್ತವ್ಯ. ಪ್ರತಿಭಟನೆ ವ್ಯಕ್ತಪಡಿಸುವುದಕ್ಕೂ ಒಂದು ಮಿತಿಯಿದೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸ್ವಾಮೀಜಿ ಹೇಳಿದರು. ತಾವು ಯಾವುದೇ ರಾಜಕೀಯ ಪಕ್ಷವನ್ನು ಈ ಹೇಳಿಕೆಯ ಮೂಲಕ ಸಮರ್ಥಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ ಸ್ವಾಮೀಜಿ, ಎಲ್ಲಾ ಸದಸ್ಯರು ಸದನದಲ್ಲಿ ಪಾಲ್ಗೊಳ್ಳಬೇಕು ಹಾಗೂ ಪ್ರಕರಣದ ಬಗ್ಗೆ ಚರ್ಚಿಸಬೇಕು ಎಂಬುದು ತಮ್ಮ ಆಶಯವಾಗಿದೆ ಎಂದರು.
ಪ್ರಕರಣದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳಿಂದ ಸದನದಲ್ಲಿಯೇ ಚರ್ಚೆ ನಡೆಯಲಿ. ತನಿಖೆಯ ಸ್ವರೂಪ, ತನಿಖೆಯ ಮುಖ್ಯಸ್ಥರು ಹಾಗೂ ಇತರ ಮಾನದಂಡಗಳೆಲ್ಲಾ ಸಂಸತ್ತಿನಲ್ಲೇ ನಿರ್ಧಾರವಾಗಲಿ ಎಂದು ಸ್ವಾಮೀಜಿ ಹೇಳಿದರು.
ಸಂಸತ್ತಿನ ಕಲಾಪಗಳು ಸ್ಥಗಿತಗೊಂಡಿರುವ ಬಗ್ಗೆ ತೀವ್ರ ವಿಷಾದ ವ್ಯಕ್ತ ಪಡಿಸಿದ ಅವರು, ಈ ನಡವಳಿಕೆ ಪ್ರಜಾಪ್ರಭುತ್ವಕ್ಕೆ ತಕ್ಕುದಲ್ಲ ಎಂದರು. ತಾವು ಮೊದಲಿನಿಂದಲೂ ಭ್ರಷ್ಟಾಚಾರವನ್ನು ವಿರೋಧಿಸಿಕೊಂಡೇ ಬಂದಿದ್ದೇವೆ. ತೆಹಲ್ಕಾ ಬಯಲು ಮಾಡಿರುವ ಪ್ರಕರಣದಿಂದ ಎಲ್ಲಾ ಪಕ್ಷಗಳು ಒಟ್ಟಿಗೆ ಕೂತು ,ಚುನಾವಣೆಯ ಖರ್ಚನ್ನು ಕಡಿಮೆ ಮಾಡುವ ಕುರಿತು ಚರ್ಚಿಸಬೇಕಾದ ಸಂದರ್ಭ ಬಂದಿದೆ ಎಂದು ವಿಶ್ವೇಶ ತೀರ್ಥರು ಹೇಳಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications