ಬೆಂಗಳೂರು ನನ್ನ ಎರಡನೆಯ ಮನೆ : ಗೋಪಿಚಂದ್ ಬಣ್ಣನೆ
ಬೆಂಗಳೂರು : ಆಲ್ ಇಂಗ್ಲೆಂಡ್ ಓಪನ್ ಚಾಂಪಿಯನ್‌ಷಿಪ್ ಗೆಲ್ಲುವ ಮೂಲಕ ಅತ್ಯುತ್ತಮ ಸಾಧನೆ ಮೆರೆದ ದೇಶದ ಅಗ್ರ ಕ್ರಮಾಂಕದ ಬ್ಯಾಡ್ಮಿಂಟನ್ ಆಟಗಾರ ಪುಲ್ಲೇಲ ಗೋಪಿಚಂದ್ ಹಾಗೂ ಅವರ ಕೋಚ್ ಗಂಗೂಲಿ ಪ್ರಸಾದ್ ಅವರಿಗೆ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನಿವೇಶನ ನೀಡುವುದೆಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ನಡೆದ ಸರಳ ಸಮಾರಂಭವೊಂದರಲ್ಲಿ ಗೋಪಿಚಂದ್ ಅವರಿಗೆ ಶಾಲು ಹಾಗೂ ಗಂಧದ ಕೆತ್ತನೆಯ ಸುಂದರ ಶ್ರೀಕೃಷ್ಣನ ಮೂರ್ತಿಯನ್ನು ನೀಡಿ ಪುರಸ್ಕರಿಸಿ, ಮುಖ್ಯಮಂತ್ರಿ ಕೃಷ್ಣ ಮಾತನಾಡುತ್ತಿದ್ದರು. ಪ್ರಕಾಶ್ ಪಡುಕೋಣೆ ಪ್ರಶಸ್ತಿ ಗಳಿಸಿದ 21 ವರ್ಷಗಳ ನಂತರ ಚಾಂಪಿಯನ್‌ಷಿಪ್ ಗಳಿಸಿದ ಗೋಪಿಚಂದ್ ಅವರ ಸಾಧನೆಯನ್ನು ಮುಕ್ತಕಂಠದಿಂದ ಹೊಗಳಿದ ಅವರು, ಮುಂದಿನ ವರ್ಷವೂ ಗೋಪಿಚಂದ್ ಚಾಂಪಿಯನ್‌ಷಿಪ್ ಗೆಲ್ಲಲಿ, ವಯಸ್ಸು ಅವರ ಪರವಿದೆ ಎಂದು ಹಾರೈಸಿದರು.
ಇದಕ್ಕೂ ಮುನ್ನ , ಬೆಂಗಳೂರಿಗೆ ಆಗಮಿಸಿದ ಗೋಪಿಚಂದ್ ಅವರಿಗೆ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು. ಕ್ರೀಡಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ (ದಕ್ಷಿಣ ವಲಯ) ಕಾರ್ಯಕಾರಿ ನಿರ್ದೇಶಕ ಎಂ.ಪಿ. ಗಣೇಶ್ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.
ತೆರೆದ ಜೀಪಿನಲ್ಲಿ ಆಲ್ ಇಂಗ್ಲೆಂಡ್ ಓಪನ್ ಚಾಂಪಿಯನ್‌ಷಿಪ್ ಗೆದ್ದ ಗೋಪಿಚಂದ್ ಅವರನ್ನು ಮೆರವಣಿಗೆ ಮಾಡಲಾಯಿತು. ಬೆಚ್ಚನೆಯ ಸ್ವಾಗತಕ್ಕೆ ಸ್ಪಂದಿಸಿದ ಆಂಧ್ರಮೂಲದ ಗೋಪಿಚಂದ್ ಕರ್ನಾಟಕವನ್ನು ತಮ್ಮ ಎರಡನೆಯ ಮನೆ ಎಂದು ಬಣ್ಣಿಸಿದರು ಹಾಗೂ ತಮ್ಮ ನಿವೃತ್ತಿ ನಂತರ ರಾಜ್ಯಕ್ಕೆ ಯಾವುದೇ ಬಗೆಯ ಸೇವೆ ಸಲ್ಲಿಸಲು ತಾವು ಉತ್ಸುಕರಾಗಿರುವುದಾಗಿ ಹೇಳಿದರು.
(ಯುಎನ್‌ಐ)
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications