ಜಿಲ್ಲಾ ಕೇಂದ್ರವಾಗಿಸಲು ಆಗ್ರಹ, ಶಹಾಪುರ ಬಂದ್ ಯಶಸ್ವಿ
ಗುಲ್ಬರ್ಗಾ : ಜಿಲ್ಲೆಯಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ಶಹಾಪುರದಲ್ಲಿ ಜಿಲ್ಲಾ ರಚನಾ ಹೋರಾಟ ಸಮಿತಿ ಗುರುವಾರ ನೀಡಿದ ಶಹಾಪುರ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.
ಆಟೋರಿಕ್ಷಾಗಳು ಕೂಡ ರಸ್ತೆಯಲ್ಲಿ ಸಂಚರಿಸಲಿಲ್ಲ. ದೈನಂದಿನ ಸಾರಿಗೆ ಬಸ್ಸುಗಳ ಸಂಚಾರ ಅಸ್ತವ್ಯಸ್ತವಾಗಿತ್ತು. ಗುಲ್ಬರ್ಗಾದ ಕೆಲವು ಪ್ರದೇಶಗಳನ್ನು ಸೇರಿಸಿ ಹೊಸ ಜಿಲ್ಲೆಯನ್ನು ಘೋಷಿಸಿದಲ್ಲಿ ಶಹಾಪುರವನ್ನೇ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ಬಂದ್ಗೆ ಕರೆನೀಡಲಾಗಿತ್ತು.
ಪಕ್ಷ ಭೇದವಿಲ್ಲದೆ ಬಂದ್ ಆಚರಿಸಲಾಗಿದ್ದು , ರಾಜ್ಯದ ಮಾಜಿ ಸಚಿವ ಹಾಗೂ ಸಂಯುಕ್ತ ಜನತಾದಳದ ಶರಣ ಬಸಪ್ಪ ದರ್ಶನಾಪುರ್ ನೇತೃತ್ವದಲ್ಲಿ ರ್ಯಾಲಿ ನಡೆಸಲಾಯಿತು. ರ್ಯಾಲಿಯಲ್ಲಿ ಕಾಂಗ್ರೆಸ್ , ಬಿಜೆಪಿ ಮತ್ತು ಜಾತ್ಯತೀತ ಜನತಾದಳದ ನಾಯಕರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಹಾಪುರವನ್ನು ಜಿಲ್ಲಾ ಕೇಂದ್ರವಾಗಿಸುವಂತೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರನ್ನು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಬಂದ್ ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ ವರದಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications