ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆಬಹಿರಂಗ ? ನಿಮಗೆ ಸಿಕ್ಕಿದೆಯಾ ?
ಬೆಂಗಳೂರು : ಕ್ವಶ್ಚನ್ ಪೇಪರ್ ಬಹಿರಂಗ ಆಗಿದೆಯಂತೆ ನಿಜವಾ ? ನಿಮಗೆ ಪೇಪರ್ ಸಿಕ್ಕಿತಾ ? - ನಗರದಲ್ಲಿ ಇಂಥಾ ಮಾತುಗಳು ಹೆಚ್ಚಾಗುತ್ತಿವೆ. ಗುರುವಾರ ಕೂಡ ಅನೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸುವ ಬದಲು ಕ್ವಶ್ಚನ್ ಪೇಪರ್‌ಗಳ ಹುಡುಕಾಟದಲ್ಲಿ ತೊಡಗಿದ್ದ ದೃಶ್ಯ ಸಾಮಾನ್ಯವಾಗಿತ್ತು .
ಕೆಲವು ವಿದ್ಯಾರ್ಥಿಗಳು ಹಾಗೂ ಪೋಷಕರು ತಿಳಿಸುವಂತೆ ಕ್ವಶ್ಚನ್ ಪೇಪರ್‌ಗಳು ಬಹಿರಂಗವಾಗಿರುವುದು ನಿಜ ಹಾಗೂ ಬಹಿರಂಗಗೊಂಡ ಪತ್ರಿಕೆಗಳ ಜೆರಾಕ್ಸ್ ಪ್ರತಿಗಳು ವಿದ್ಯಾರ್ಥಿಗಳ ಕೈ ಬದಲಿಸುತ್ತಿವೆ. ಇಂಗ್ಲೀಷ್, ಗಣಿತ ಹಾಗೂ ವಿಜ್ಞಾನ ಶಾಸ್ತ್ರಗಳ ಪ್ರಶ್ನೆ ಪತ್ರಿಕೆಗಳು ಮಾರುಕಟ್ಟೆಯಲ್ಲಿವೆ. ನಗರದ ಜೆ.ಸಿ. ನಗರ, ಗಂಗಾನಗರ, ಆರ್.ಟಿ. ನಗರ ಮುಂತಾದ ಬಡಾವಣೆಗಳಲ್ಲಿ ಪ್ರಶ್ನೆ ಪತ್ರಿಕೆಗಳ ಜೆರಾಕ್ಸ್ ಪ್ರತಿಗಳು ದೊರೆಯುತ್ತಿವೆ.
ವಿದ್ಯಾರ್ಥಿಗಳ ಆತಂಕ : ಒಂದೆಡೆ ಕೆಲವು ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸಿಕ್ಕ ಬಗೆಗೆ ಖುಷಿ ಅನುಭವಿಸುತ್ತಿದ್ದರೆ, ವರ್ಷಪೂರ್ತಿ ಪರೀಕ್ಷೆಗೆ ಸಿದ್ಧತೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ವಿದ್ಯಮಾನಗಳ ಬಗ್ಗೆ ಆತಂಕ ವ್ಯಕ್ತ ಪಡಿಸುತ್ತಿದ್ದಾರೆ. ಈ ಬಾರಿ ಭಾರೀ ಬಂದೋಬಸ್ತ್ ನಡುವೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ನಿರ್ದೇಶಕರು ಹೇಳಿದ್ದರು. ಆದರೆ, ಈಗ ನಡೆಯುತ್ತಿರೋದೆ ಬೇರೆ. ಈ ರೀತಿ ಆದ್ರೆ ಪರೀಕ್ಷೆಗೆ ಏನು ಅರ್ಥ ಇರುತ್ತೆ ಹೇಳಿ ಅನ್ನೋದವರ ಆತಂಕ.
ಕ್ವಶ್ಚನ್ ಪೇಪರ್ ಬಹಿರಂಗ ಆಗಿಲ್ಲ , ವದಂತಿಗಳಿಗೆ ಕಿವಿ ಕೊಡಬೇಡಿ
ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿದೆ ಎನ್ನುವುದು ಯಾರೋ ಕಿಡಿಗೇಡಿಗಳು ಹಬ್ಬಿಸಿರುವ ವಂದತಿ. ಇಂಥಾ ಊಹಾಪೋಹಗಳಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಗಮನ ಕೊಡಬಾರದೆಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟಪಡಿಸಿದೆ.
ಪ್ರಶ್ನೆ ಪತ್ರಿಕೆ ಬಹಿರಂಗ ವದಂತಿಗಳ ಬಗ್ಗೆ ಮಂಡಳಿ ವಿಚಾರಣೆ ನಡೆಸಿದ್ದು , ಅದು ವದಂತಿಯೆಂಬುದು ಸ್ಪಷ್ಟವಾಗಿದೆ. ರಾಜ್ಯದ ಎಲ್ಲೆಡೆಗಳಲ್ಲೂ ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಪ್ರಾರಂಭವಾಗಿದೆ. ರಾಜ್ಯದ ಯಾವುದೇ ಭಾಗದಲ್ಲೂ ಅಹಿತಕರ ಘಟನೆಗಳು ನಡೆದಿರುವ ವರದಿಗಳು ಬಂದಿಲ್ಲ ಎಂದು ಮಂಡಳಿಯ ನಿರ್ದೇಶಕ ಎನ್.ಡಿ. ಭಟ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications