ಪದ್ಮ ಪ್ರಶಸ್ತಿ ಸಮಾರಂಭಕ್ಕೆಬಿಸ್ಮಿಲ್ಲಾ ಖಾನ್, ದೇಜಗೌ ಆ್ಯಬ್ಸೆಂಟ್
ನವದೆಹಲಿ : ಭಾರತರತ್ನ ಶಹನಾಯಿ ವಾದಕ ಬಿಸ್ಮಿಲ್ಲಾ ಖಾನ್, ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಕನ್ನಡ ಸಾಹಿತಿ ದೇಜಗೌ, ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಬಾಲಿವುಡ್ ನಟ ದೇವಾನಂದ್, ನಿರ್ಮಾಪಕ ಬಿ.ಆರ್.ಚೋಪ್ರಾ, ಹೊಟೇಲ್ ಉದ್ಯಮಿ ಎಂ.ಎಸ್.ಒಬೇರಾಯ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆ್ಯಬ್ಸೆಂಟ್.
ಗುರುವಾರ 55 ಗಣ್ಯರಿಗೆ ರಾಷ್ಟ್ರಪತಿ ಕೆ.ಆರ್.ನಾರಾಯಣ್ ವಿವಿಧ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಸಮಾರಂಭ ದಿಗ್ಗಜರಿಲ್ಲದೆ ಸ್ವಲ್ಪ ಕಳೆಗುಂದಿತ್ತು. ಬಿಸ್ಮಿಲ್ಲಾ ಖಾನ್ ಅವರು ಹುಷಾರಿಲ್ಲದ ಕಾರಣ ಪ್ರಶಸ್ತಿ ಸ್ವೀಕರಿಸಲು ಬರಲಾಗಲಿಲ್ಲವಂತೆ.
ಬಿಗ್ ಬಿ ಅಮಿತಾಭ್ ಬಚ್ಚನ್, ಮಲೆಯಾಳಂ ನಟ ಮೋಹನ್ ಲಾಲ್, ಬಾಲಿವುಡ್ ನಿರ್ಮಾಪಕ ಹೃಷಿಕೇಶ್ ಮುಖರ್ಜಿ, ವಿದ್ವಾಂಸ ಕೆ.ಸಚ್ಚಿದಾನಂದ ಮೂರ್ತಿ, ಹಿರಿಯ ಅಧಿಕಾರಿ ಸಿ.ವಿ.ನರಸಿಂಹನ್, ನಾಟ್ಯ ಕಲಾವಿದರಾದ ಉಮಾ ಶರ್ಮಾ (ಕಥಕ್), ಯಾಮಿನಿ ಕೃಷ್ಣಮೂರ್ತಿ (ಭರತನಾಟ್ಯ), ಶೋಭಾ ನಾಯ್ಡು (ಕೂಚಿಪುಡಿ) ಮೊದಲಾದವರಿಗೆ ಪದ್ಮಶ್ರೀ, ಪದ್ಮಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನು ರಾಷ್ಟ್ರಪತಿ ಕೆ.ಆರ್.ನಾರಾಯಣನ್ ಪ್ರದಾನ ಮಾಡಿದರು.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಕೃಷ್ಣಕಾಂತ್, ಪ್ರಧಾನಿ ಎ.ಬಿ.ವಾಜಪೇಯಿ, ಗೃಹ ಸಚಿವ ಎಲ್.ಕೆ.ಅಡ್ವಾಣಿ, ಕಾನೂನು ಸಚಿವ ಅರುಣ್ ಜೈಟ್ಲಿ ಮೊದಲಾದವರು ಹಾಜರಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications