ಏಪ್ರಿಲ್ 7ರಿಂದ ದೆಹಲಿಯಲ್ಲಿ ಕನ್ನಡ ಭಾಷಿಕರ ಸಮ್ಮೇಳನ
ಬೆಂಗಳೂರು : ಕನ್ನಡ ಭಾಷಿಕರ 18ನೇ ರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 7 ಮತ್ತು 8ರಂದು ನವದೆಹಲಿಯಲ್ಲಿ ನಡೆಯಲಿದೆ.
ದೆಹಲಿಯಲ್ಲಿ ಪ್ರಕಟವಾಗುವ ‘ದೆಹಲಿ ಕನ್ನಡಿಗ’ ಮಾಸಿಕ ಆಯೋಜಿಸಿರುವ ಈ ಸಮ್ಮೇಳನವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವೆ ನಫೀಸಾ ಫಸಲ್ ಉದ್ಘಾಟಿಸಲಿದ್ದಾರೆ. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಎನ್.ಆರ್.ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಜಾಗೃತಿ ಇಲಾಖಾ ಆಯುಕ್ತ ಎನ್.ವಿಠ್ಠಲ್ ಸ್ಮರಣಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಸಾಂಸ್ಕೃತಿಕ ಹಬ್ಬವನ್ನು ಬೆಂಗಳೂರು ಮೇಯರ್ ಪ್ರೇಮಾ ಕಾರ್ಯಪ್ಪ ಉದ್ಘಾಟಿಸುವರು.
ಸಮ್ಮೇಳನದ ಸಂಚಾಲಕ ಎಂ.ಬಿ.ಸಾಮಗ ಮಾಧ್ಯಮಗಳಿಗೆ ಹೊರಡಿಸಿರುವ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಚೆನ್ನೈನ ಐಜಿಟಿಯ ಮಾಜಿ ನಿರ್ದೇಶಕ ಪ್ರೊ.ಪಿ.ವಿ.ಇಂದಿರೇಶನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರೊಫೆಸರ್ ಡಾ.ಎ.ಆರ್.ರಮೇಶ ರಾವ್, ಸಿಂಡಿಕೇಟ್ ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಡಿ.ಟಿ.ಪೈ ಅವರಿಗೆ ಕ್ರಮವಾಗಿ ಉತ್ತಮ ಹೊರನಾಡ ಕನ್ನಡಿಗ, ಉತ್ತಮ ದೆಹಲಿ ಕನ್ನಡಿಗ ಹಾಗೂ ಉತ್ತಮ ಬ್ಯಾಂಕರ್ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುವುದು.
ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿರುವ ಈ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಾಗುವುದು. ಮಹಿಳಾ ಕೂಟ, ಭಾಷೈಕ್ಯತೆ, ಸಂಗೀತ, ನೃತ್ಯ, ಕವಿ ಗೋಷ್ಠಿ ಇವೆಲ್ಲಾ ಸಮ್ಮೇಳನದ ಆಕರ್ಷಣೆಗಳು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications