200 ಎಕರೆ ಭೂಮಿಯಲ್ಲಿ ಆಯುರ್ವೇದ ಸಸ್ಯೋದ್ಯಾನ : ಸಚಿವ
ಮೂಡಿಬಿದರೆ: ರಾಜ್ಯದಲ್ಲಿ ಆಯುರ್ವೇದ ಸಸ್ಯಗಳ ಉದ್ಯಾನಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶ ರಾಜ್ಯ ಸರಕಾರಕ್ಕಿದೆ. ಈ ವಿಷಯವನ್ನು ತೋಟಗಾರಿಕೆ ಸಚಿವ ಅಲ್ಲಂ ವೀರಭದ್ರಪ್ಪ ಶುಕ್ರವಾರ ಇಲ್ಲಿ ತಿಳಿಸಿದರು. ಎರಡು ದಿನಗಳ ಕೃಷಿ ಮೇಳ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
200 ಎಕರೆ ಪ್ರದೇಶದಲ್ಲಿ ಆಯುರ್ವೇದ ಔಷಧೀಯ ಮೂಲಿಕೆಗಳ ಉದ್ಯಾನಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಪಡಿಸಲು ತಮ್ಮ ಇಲಾಖೆ ಉದ್ದೇಶಿಸಿದೆ ಎಂದು ಅವರು ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕೃಷಿ ಮೇಳವನ್ನು ಆಯೋಜಿಸಿತ್ತು.
ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದ ಬಗ್ಗೆ ಮಾತನಾಡಿದ ಅವರು, ರೈತರು ಸಾಂಪ್ರದಾಯಿಕ ಕೃಷಿ ಹಾಗೂ ಬೆಳೆಗಳಿಗೇ ಜೋತು ಬೀಳದೆ, ಪರ್ಯಾಯ ಬೆಳೆ ಬೆಳೆಯಲು ಮುಂದಾಗಬೇಕು ಎಂದೂ ಸಲಹೆ ಮಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆ ಅವರು ನಿರಂತರವಾಗಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಇರುವ ನಿಟ್ಟಿನಲ್ಲಿ ಪರ್ಯಾಯ ಬೆಳೆಗಳ ಬಗ್ಗೆ ಗಂಭೀರ ಚಿಂತನೆ ನಡೆಸುವ ಅನಿವಾರ್ಯತೆಯ ಬಗ್ಗೆ ಗಮನ ಸೆಳೆದರು.
ಎಸ್.ಕೆ.ಡಿ.ಆರ್.ಡಿ.ಪಿಯ ಈ ಕೃಷಿ ಮೇಳದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 15,000 ರೈತರು ಪಾಲ್ಗೊಂಡಿದ್ದರು. (ಯು.ಎನ್.ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications