ರಿಯಾಯ್ತಿ ಇಲ್ಲ , ರೈತರ ಪಂಪ್‌ಸೆಟ್‌ಗಳಿಗೆರಾತ್ರಿಯಿಡೀ ವಿದ್ಯುತ್!
ಬೆಂಗಳೂರು : ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಪಂಪ್ ಸೆಟ್‌ಗಳಿಗೆ ರಾತ್ರಿ ವೇಳೆ ನಿರಂತರ ವಿದ್ಯುತ್ ಪೂರೈಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಇಂಧನ ಖಾತೆ ಸಹಾಯಕ ಸಚಿವ ವೀರಕುಮಾರ್ ಪಾಟೀಲ್ ಗುರುವಾರ ವಿಧಾನಸಭೆಯಲ್ಲಿ ಪ್ರಕಟಿಸಿದರು.
ಇನ್ನು ಹದಿನೈದು ದಿನಗಳಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ರಾತ್ರಿಯಿಡೀ ನಿರಂತರ ವಿದ್ಯುತ್ ಪೂರೈಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ರಾಜ್ಯದಲ್ಲಿ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಸೇರಿದಂತೆ ಯಾವುದೇ ಯೋಜನೆಗಳಿಗೆ ಉಚಿತ ವಿದ್ಯುತ್ ಪೂರೈಸುವ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ರೈತರಿಗೆ ವಿದ್ಯುತ್ತನ್ನು ಉಚಿತವಾಗಿ ನೀಡಿ, ಆಗಾಗ ಲೋಡ್ ಶೆಡ್ಡಿಂಗ್ ಹೇರುವ ಬದಲು ಕಡಿಮೆ ದರದಲ್ಲಿಯೇ ನಿರಂತರ ವಿದ್ಯುತ್ ಒದಗಿಸಿ ಎಂದು ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ವಾಜಪೇಯಿ ಸಲಹೆ ಮಾಡಿದ ತಿಂಗಳಂತರದಲ್ಲಿ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದೆ.
ಪ್ರಸ್ತುತ ಹದಿನಾರು ಲಕ್ಷ ಮನೆಗಳಿಗೆ ಭಾಗ್ಯಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಾಲಿನ ಮುಂಗಡ ಪತ್ರದಲ್ಲಿ ಇನ್ನೂ ಎರಡು ಲಕ್ಷ ಕುಟುಂಬಗಳಿಗೆ ವಿದ್ಯುತ್‌ಸಂಪರ್ಕ ಕಲ್ಪಿಸುವುದಾಗಿ ಹೇಳಲಾಗಿತ್ತು. ಆದರೆ ಸರಕಾರ ಉಚಿತ ವಿದ್ಯುತ್ ವಿತರಣೆಯನ್ನು ನಿಲ್ಲಿಸಲಿರುವುದರಿಂದ ಮುಂಗಡ ಪತ್ರದಲ್ಲಿ ಘೋಷಿಸಲಾದ ಉಚಿತ ವಿದ್ಯುತ್ ಸಂಪರ್ಕ ಯೋಜನೆಗಳು ಜಾರಿಗೆ ಬರುವ ನಿರೀಕ್ಷೆ ಇಲ್ಲ.
ಕೇಂದ್ರ ವಿದ್ಯುತ್ ಸ್ಥಾವರದಿಂದ ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ ಪಡೆಯಲು ಸರಕಾರ ಯತ್ನಿಸಿದೆ. ಇನ್ನು ಮೂರು ವರ್ಷಗಳಲ್ಲಿ ರಾಜ್ಯ ವಿದ್ಯುತ್ ಸ್ಥಾವರಗಳು ಸಾಕಷ್ಟು ವಿದ್ಯುತ್ ಉತ್ಪಾದಿಸುವಷ್ಟು ಶಕ್ತವಾಗಲಿವೆ ಎಂದು ವೀರಕುಮಾರ್ ಪಾಟೀಲ್ ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications