ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಬಿಕರಿ, ಮರು ಪರೀಕ್ಷೆನಡೆಸಲು ಪೋಷಕರ ಒತ್ತಾಯ
ಬೆಂಗಳೂರು : ಜೀವನದ ಮೊದಲ ಮಜಲು ಎನ್ನಬಹುದಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಇಂಗ್ಲಿಷ್ ಮತ್ತು ವಿಜ್ಞಾನ ಪತ್ರಿಕೆಗಳು ಒಂದು ಸಾವಿರ ರುಪಾಯಿಗೂ ಹೆಚ್ಚು ಬೆಲೆಗೆ ಬಿಕರಿಯಾಗಿವೆ. ಪರೀಕ್ಷೆಯಲ್ಲಿ ಕೊಡಲಾದ ಪ್ರಶ್ನೆ ಪತ್ರಿಕೆಯ ಯಥಾವತ್ತು ಪ್ರಶ್ನೆಗಳು ಕೊಂಡ ಪ್ರಶ್ನೆ ಪತ್ರಿಕೆಗಳಲ್ಲೂ ಇದ್ದವಂತೆ. ಪ್ರಶ್ನೆ ಪತ್ರಿಕೆ ಬಯಲಾಗಿರುವ ಸುದ್ದಿ ರಾಜ್ಯದ ತುಂಬೆಲ್ಲ ಹಬ್ಬಿದ್ದು, ಪೋಷ ಕರು ಮರು ಪರೀಕ್ಷೆಗೆ ಒತ್ತಾಯಿಸುತ್ತಿದ್ದಾರೆ.
ಬಿಕರಿಯಾದ ಪ್ರಶ್ನೆ ಪತ್ರಿಕೆಗಳನ್ನು ಕೈಯಲ್ಲಿ ಬರೆಯಲಾಗಿತ್ತು. ಕೆಲವು ಪೋಷಕರು ಮಾಧ್ಯಮಗಳಿಗೂ ಪರೀಕ್ಷೆ ಪ್ರಾರಂಭವಾಗುವ ಮುನ್ನವೇ ಪ್ರಶ್ನೆ ಪತ್ರಿಕೆಗಳನ್ನೂ ಒದಗಿಸಿ, ಅ ಬಯಲಾಗಿರುವ ವಿಷಯವನ್ನು ಪ್ರಕಟಿಸುವಂತೆ ಆಗ್ರಹಿಸಿದ್ದಾರೆ. ಇಂಡಿಯಾಇನ್ಫೋಗೆ ದೂರವಾಣಿ ಮಾಡಿದ ಬೆಂಗಳೂರಿನ ರಮೇಶ್, ಇಂಗ್ಲಿಷ್ ಹಾಗೂ ವಿಜ್ಞಾನ ಪ್ರಶ್ನೆ ಪತ್ರಿಕೆಗಳು, ಬಿಕರಿಯಾಗಿದ್ದ ಪ್ರಶೆಪತ್ರಿಕೆಗಳಲ್ಲಿನ ಪ್ರಶ್ನೆಗಳನ್ನೇ ಒಳಗೊಂಡಿದ್ದವು. ಎಲ್ಲೋ ಕೆಲವು ಪದಗಳು ಮಾತ್ರ ಬದಲಾಗಿದ್ದವು ಎಂದು ತಿಳಿಸಿದರು. ಅಷ್ಟೇ ಅಲ್ಲದೆ ಸರ್ಕಾರ ಮರು ಪರೀಕ್ಷೆ ನಡೆಸಲೇಬೇಕು. ಇಲ್ಲವಾದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಮಕ್ಕಳಿಗೆ ಅನ್ಯಾಯವಾಗಲಿದೆ ಎಂದು ಅಲವತ್ತುಕೊಂಡರು.
ವಿಶ್ವನಾಥ್ ಮುಗುಮ್ಮು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಚ್.ವಿಶ್ವನಾಥ್ ಜನರ ಈ ಆಗ್ರಹಕ್ಕೆ ಸೊಪ್ಪು ಹಾಕುತ್ತಿಲ್ಲ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಕೆಮೆರಾ ಇಟ್ಟಿದ್ದೇವೆ. ಸಿಬ್ಬಂದಿ ಕೂಡಾ ತೀವ್ರ ನಿಗಾ ಇಟ್ಟಿದ್ದಾರೆ. ಯಾರೋ ಕೈಯಲ್ಲಿ ಬರೆದು ಮಾರುಕಟ್ಟೆಯಲ್ಲಿ ಮಾರಿದ ಪ್ರಶ್ನೆಪತ್ರಿಕೆಗಳನ್ನು ಮುಂದಿಟ್ಟುಕೊಂಡು ಮರು ಪರೀಕ್ಷೆ ನಡೆಸಿ ಎನ್ನುವುದು ಸರಿಯಲ್ಲ ಎಂಬುದು ವಿಶ್ವನಾಥ್ ವಾದ.
ಮುಂದಿನ ವರ್ಷದಿಂದ ಹೊಸ ಪದ್ಧತಿ : ಬಿಕರಿಯಾದ ಪ್ರಶ್ನಪತ್ರಿಕೆಗಳು ಕೈಯಲ್ಲಿ ಬರೆಯಲ್ಪಟ್ಟವು ಎಂಬ ಒಂದೇ ಕಾರಣಕ್ಕೆ ಸರ್ಕಾರ ಪ್ರಶ್ನೆಪತ್ರಿಕೆ ಬಹಿರಂಗವಾಗಿಲ್ಲ ಎನ್ನುತ್ತಿದೆ. ಇದು ಸರಿಯಲ್ಲ ಎಂಬ ಪ್ರಶ್ನೆ ಗುರುವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಆಗುವ ಅನ್ಯಾಯ ತಪ್ಪಿಸುವಂತೆ ಆಗ್ರಹ ಹೊರಬಿತ್ತು. ಈ ಕಾರಣಕ್ಕಾಗೇ ಮುಂದಿನ ವರ್ಷದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಕೃಷ್ಣ ಹೇಳಿದರು.
ಆದರೆ ಈಗ ಆಗಿರುವ, ಆಗುತ್ತಿರುವ ಅನ್ಯಾಯಕ್ಕೆ ವಿಶ್ವನಾಥ್ ಏನಾದರೂ ಮಾಡಲೇಬೇಕಲ್ಲವೇ? ಅವರಿಂದ ಉತ್ತಿ ಸಿಕ್ಕುತ್ತಿಲ್ಲ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications