ತೆಹಲ್ಕಾ ಹಗರಣದ ತನಿಖಾ ಮುಖ್ಯಸ್ಥರಾಗಿ ನ್ಯಾಯಮೂರ್ತಿ ವೆಂಕಟಸ್ವಾಮಿ
ನವದೆಹಲಿ : ಸುಪ್ರಿಂಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ವೆಂಕಟಸ್ವಾಮಿ ತೆಹಲ್ಕಾ ಬಯಲಿಗೆಳೆದ ರಕ್ಷಣಾ ಹಗರಣ ತನಿಖೆ ನಡೆಸಲಿರುವ ಏಕ ಸದಸ್ಯ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.
ಚೆನ್ನೈನಿಂದ ದೂರವಾಣಿ ಮೂಲಕ ಖುದ್ದು ನ್ಯಾಯಮೂರ್ತಿ ವೆಂಕಟಸ್ವಾಮಿ ಈ ವಿಷಯ ದೃಢಪಡಿಸಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ತಮ್ನನ್ನು ಈ ಕೆಲಸ ವಹಿಸಿಕೊಳ್ಳುವಂತೆ ಕೇಳಿಕೊಂಡರು. ಅವರೊಂದಿಗೆ ಮಾತುಕತೆ ನಡೆಸಿದ ನಂತರ ತನಿಖಾ ಸಮಿತಿಯ ಮುಖ್ಯಸ್ಥಿಕೆ ವಹಿಸಿಕೊಳ್ಳಲು ಒಪ್ಪಿದೆ ಎಂದು ವೆಂಕಟಸ್ವಾಮಿ ಹೇಳಿದರು.
ತೆಹಲ್ಕಾ ಪ್ರಕರಣದ ತನಿಖೆಗೆ ಹಾಲಿ ನ್ಯಾಯಾಧೀಶರನ್ನು ನೇಮಿಸುವ ಪ್ರಸ್ತಾವನೆಯನ್ನು ತಳ್ಳಿಹಾಕಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಆನಂದ್, ಕಳೆದ ವರ್ಷ ನಿವೃತ್ತರಾಗಿರುವ ನ್ಯಾಯಮೂರ್ತಿ ವೆಂಕಟಸ್ವಾಮಿ ಅವರನ್ನು ಈ ಕೆಲಸಕ್ಕೆ ಹಚ್ಚಿದ್ದಾರೆ. ಏಕ ಸದಸ್ಯ ತನಿಖಾ ಸಮಿತಿ ಸ್ಥಾಪನೆಗೆ ಮಾರ್ಚ್ 16ರಂದು ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.
ತನಿಖಾ ಪೂರ್ವ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳಲು ನ್ಯಾಯಮೂರ್ತಿ ವೆಂಕಟಸ್ವಾಮಿ ಮುಂದಿನ ವಾರ ದೆಹಲಿಗೆ ತೆರಳುವ ನಿರೀಕ್ಷೆಯಿದೆ. ತನಿಖೆಗೆ ಸರ್ಕಾರ ನಿಗದಿ ಪಡಿಸಿರುವ 4 ತಿಂಗಳ ಗಡುವು ಸಾಕಾಗಲಿದೆ ಎಂದು ನ್ಯಾಯಮೂರ್ತಿ ವೆಂಕಟಸ್ವಾಮಿ ಹೇಳಿದ್ದಾರೆ.
(ಪಿಟಿಐ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications