ಖ್ಯಾತ ವಿಜ್ಞಾನಿ ಸಿ.ಎನ್.ಆರ್. ರಾವ್‌ಗೆ ಕರ್ನಾಟಕ ರತ್ನ ಪ್ರಶಸ್ತಿ
ಬೆಂಗಳೂರು : ಕಲೆ, ಸಾಹಿತ್ಯ, ರಾಜಕೀಯ ಕ್ಷೇತ್ರದ ನಂತರ ವಿಜ್ಞಾನ ಕ್ಷೇತ್ರಕ್ಕೆ ಮನ್ನಣೆ ನೀಡುವ ನಿಟ್ಟಿನಲ್ಲಿ ಚಿಂತಿಸಿರುವ ಸರಕಾರ, ಕರ್ನಾಟಕದ ಪರಮೋಚ್ಚ ಪುರಸ್ಕಾರವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಖ್ಯಾತ ವಿಜ್ಞಾನಿ ಸಿ.ಎನ್.ಆರ್. ರಾವ್ ಅವರಿಗೆ ನೀಡಲು ನಿರ್ಧರಿಸಿದೆ.
ಅಂತಾರಾಷ್ಟ್ರೀಯ ಮನ್ನಣೆ ಗಳಿಸಿರುವ ಖ್ಯಾತ ವಿಜ್ಞಾನಿ ಹಾಗೂ ಕನ್ನಡಿಗ ಡಾ. ಸಿ.ಎನ್.ಆರ್. ರಾವ್ ಅವರನ್ನು ಈ ಪ್ರಶಸ್ತಿಗೆ ರಾಜ್ಯ ಸರಕಾರ ಆಯ್ಕೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅವರು ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಹಿರಿಯ ಗಾಂಧೀವಾದಿ ಹಾಗೂ ನಿವೃತ್ತ ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸರಾವ್ ನೇತೃತ್ವದಲ್ಲಿ ರಚಿಸಲಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿ, ಸಿ.ಎನ್.ಆರ್. ರಾವ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಅರ್ಹ ವ್ಯಕ್ತಿಗೆ ದೊರಕುತ್ತಿರುವ ಸೂಕ್ತ ಮನ್ನಣೆ ಇದಾಗಿದೆ ಎಂದು ಅವರು ಹೇಳಿದರು. ಈ ಮುನ್ನ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನ್ನಡದ ವರನಟ ಡಾ. ರಾಜ್‌ಕುಮಾರ್, ರಾಷ್ಟ್ರಕವಿ ಕು.ವೆಂ.ಪು ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಎಸ್. ನಿಜಲಿಂಗಪ್ಪ ಅವರಿಗೆ ನೀಡಿ ಗೌರವಿಸಲಾಗಿತ್ತು.
ಸಿ.ಎನ್.ಆರ್. ರಾವ್ ಅವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ನಿರ್ದೇಶಕರಾಗಿ, ಜವಾಹರಲಾಲ್ ನೆಹರೂ ಆಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸೆಂಟರ್‌ನ ಅಧ್ಯಕ್ಷರಾಗಿ, ವಿದೇಶಗಳ ಹಲವು ವಿಶ್ವವಿದ್ಯಾಲಯಗಳ ಗೌರವ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸುವ ಮೂಲಕ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದಾರೆ.
(ಇನ್ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications