ನಿರಾಶೆಯ ಬಜೆಟ್ : ಪ್ರತಿಪಕ್ಷ ನಾಯಕರ ಪ್ರತಿಕ್ರಿಯೆ
ಬೆಂಗಳೂರು : ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ ಎಂದು ಪ್ರತಿಪಕ್ಷ ನಾಯಕರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಕೆಲವೊಂದು ತೆರಿಗೆಗಳ ವಿಷಯದಲ್ಲಿ ಮುಖ್ಯಮಂತ್ರಿ ಸುದೀರ್ಘ ಕಸರತ್ತು ನಡೆಸಿದ್ದಾರೆ. ಈ ಬಗ್ಗೆ ಸಮಗ್ರ ಅಧ್ಯಯನದ ನಂತರ ಮಾತ್ರ ಪ್ರತಿಕ್ರಿಯೆ ನೀಡಲು ಸಾಧ್ಯ ಎಂದು ಪ್ರತಿಪಕ್ಷದ ನಾಯಕ ಕೆ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ಒಟ್ಟಾರೆಯಾಗಿ ಮುಂದಿನ ಸಾಲಿಗಾಗಿ ಮಂಡಿಸಲಾಗಿರುವ ಬಜೆಟ್ ಆಶಾದಾಯಕವಾಗೇನೂ ಇಲ್ಲ. ಬಜೆಟ್ನಲ್ಲಿ ಯಾವುದೇ ವಿಶೇಷ ಅಂಶಗಳೂ ಇಲ್ಲ. ಆಶಾಭಾವನೆ ಮೂಡಿಸುವ ರೀತಿಯಲ್ಲಿ ಬಜೆಟ್ ಇಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಿರಾಶಾದಾಯಕ : ಆರ್ಥಿಕ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಕೃಷ್ಣ ಅವರು ಮಂಡಿಸಿರುವ ಬಜೆಟ್ ನಿರಾಶಾದಾಯಕವಾಗಿದೆ. ಕಳೆದ ವರ್ಷದ ಬಜೆಟ್ನಲ್ಲಿ ಏನೇನು ಸಾಧನೆ ಮಾಡ್ತೇವೆ ಎಂದು ಹೇಳಲಾಗಿತ್ತೋ, ಅದನ್ನು ಕಾರ್ಯಗತ ಮಾಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಪ್ರತಿಪಕ್ಷದ ನಾಯಕ ಡಿ.ಎಚ್. ಶಂಕರಮೂರ್ತಿ ಹೇಳಿದ್ದಾರೆ.
ರಾಷ್ಟ್ರದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ, ಈಗ ಮತ್ತೆ ತೆರಿಗೆ ಏರಿಕೆ ಮಾಡಲಾಗಿದೆ. ಇದರಿಂದ ರಾಜ್ಯದ ಜನತೆಯ ಮೇಲೆ ಹೆಚ್ಚುವರಿ ತೆರಿಗೆ ಹೊರೆ ಬೀಳಲಿದೆ ಎಂದು ಅವರು ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications