ಬೆಲ್ಲಕ್ಕಿಂತಲೂ ಬೇವೇ ಹೆಚ್ಚಾಗಿರುವ ಬಜೆಟ್ : ಪಿ.ಜಿ.ಆರ್. ಸಿಂಧ್ಯಾ
ಬೆಂಗಳೂರು : ವಿಷುನಾಮ ಸಂವತ್ಸರದ ಮಾರನೆಯ ದಿನ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಂಡಿಸಿದ ಬಜೆಟ್‌ನಲ್ಲಿ ಬೆಲ್ಲಕ್ಕಿಂತಲೂ ಬೇವೇ ಹೆಚ್ಚಾಗಿದೆ. ಇದೊಂದು ನಿರಾಶಾದಾಯಕ ಬಜೆಟ್ ಎಂದು ವಿರೋಧ ಪಕ್ಷದ ನಾಯಕ ಪಿ.ಜಿ.ಆರ್. ಸಿಂಧ್ಯಾ ಬಣ್ಣಿಸಿದ್ದಾರೆ.
ಹಳೆಯ ಘೋಷಣೆಗಳನ್ನೇ ಪುನರ್ ಸ್ಮರಣೆ ಮಾಡಲಾಗಿದೆ. ಹೊಸ ಸಂವತ್ಸರದಲ್ಲಿ ಮಂಡಿಸಿದ ಈ ಬಜೆಟ್‌ನಲ್ಲಿ ಹೊಸತೇನಿಲ್ಲ ಎಂದೂ ಅವರು ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರಕಾರ ಮಂಡಿಸಿದ ಬಜೆಟ್‌ನಲ್ಲಿ ಯಾವುದೇ ವಿಶೇಷವಿಲ್ಲ. ಕಳೆದ ಸಾಲಿನ ಬಜೆಟ್‌ನಲ್ಲಿ ಹೇಳಲಾಗಿದ್ದ ವಿಷಯಗಳನ್ನೇ ಪುನರಾವರ್ತನೆ ಮಾಡಲಾಗಿದೆ. ಕಳೆದ ಬಾರಿ ಪ್ರಸ್ತಾಪಿಸಿದ್ದ ಅಂಶಗಳನ್ನೇ ತಿರುಚಿ ಹೇಳಲಾಗಿದೆ ಎಂದು ಪ್ರತಿಪಕ್ಷದ ಸದಾನಂದ ಗೌಡ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷ ಸೇರಿದ ಬಿ.ಬಿ. ಶಿವಪ್ಪ ಅವರು ಕೂಡ ಬಜೆಟ್‌ನಲ್ಲಿ ಕಾಫಿ ಬೆಳಗಾರರ ಮೇಲೆ ಹೆಚ್ಚಿನ ಹೊರೆ ಹೇರಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಫಿ ಬೆಳೆಗಾರರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಈ ಬಜೆಟ್ ಮಾಡಿದೆ ಎಂದು ಜಾತ್ಯತೀತ ದಳದ ಚೆನ್ನಿಗಪ್ಪ ಟೀಕಿಸಿದ್ದಾರೆ. ಜಾಗತೀಕರಣದ ಆವೇಶದಲ್ಲಿ ಸಣ್ಣ ಕೈಗಾರಿಕೆಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಬೆಳೆ ಹಾಗೂ ಬೆಲೆಯ ಕುಸಿತದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತನಿಗೆ ಪರಿಹಾರ ನೀಡುವಲ್ಲಿ ಈ ಬಜೆಟ್ ವಿಫಲವಾಗಿದೆ. ಇದೊಂದು ನಿರಾಶಾದಾಯಕ ಬಜೆಟ್ ಎಂದು ಸಂಯುಕ್ತ ಜನತಾದಳ ನಾಯಕ ಸಿ. ಭೈರೇಗೌಡ ಹೇಳಿದ್ದಾರೆ.
ಬಹುರಾಷ್ಟ್ರೀಯ ಕಂಪನಿಗಳ ವಿಷಯದಲ್ಲಿ ಉದಾರ ನೀತಿ ತಳೆದಿರುವ ಸರಕಾರ ರೈತರಿಗೆ ಪರಿಹಾರ ನೀಡುವ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಈ ಬಾರಿಯ ಬಜೆಟ್ ರೈತರ ಪರವಾಗಿರುತ್ತದೆ ಎಂದು ನಿರೀಕ್ಷಿಸಿದ್ದ ರಾಜ್ಯದ ಜನತೆಯ ಆಸೆ ಕಮರಿಹೋಗಿದೆ ಎಂದು ಅವರು ಹೇಳಿದ್ದಾರೆ. ಪುಟ ತುಂಬಿಸುವ ಸಲುವಾಗಿ ಹೇಳಿದ್ದನ್ನೇ ಸರಕಾರ ಮತ್ತೆ ಮತ್ತೆ ಹೇಳಿದೆ ಎಂದೂ ಅವರು ಬಜೆಟ್ ಬಗ್ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications