ಮಹಾದಾಯಿಯಿಂದ ಮಲಪ್ರಭಾಗೆ ನೀರು ಹರಿಯೋದು ಅನುಮಾನ
ಬೆಂಗಳೂರು : ಮಹಾದಾಯಿ ನದಿಯಿಂದ ಮಲಪ್ರಭಾಗೆ ನೀರು ಹರಿಸಲು ಗೋವಾ ಸರ್ಕಾರ ಸಹಕಾರ ನೀಡದಿದ್ದಲ್ಲಿ, ರೈತರ ಹಿತಾಸಕ್ತಿ ರಕ್ಷಿಸಲು ಪರ್ಯಾಯ ಯೋಜನೆಗಳನ್ನು ಸರ್ಕಾರ ಸಿದ್ಧ ಮಾಡಿಟ್ಟುಕೊಂಡಿದೆ.
ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ರಾಜ್ಯ ಭಾರೀ ಮತ್ತು ಮಧ್ಯಮ ನೀರಾವರಿ ಸಚಿವ ಎಚ್.ಕೆ.ಪಾಟೀಲ್ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ವಿಷಯ ತಿಳಿಸಿದರು. ಗೋವಾದ ಅಧಿಕಾರಿಗಳ ನಿಯೋಗವೊಂದು ಸದ್ಯದಲ್ಲೇ ರಾಜ್ಯಕ್ಕೆ ಆಗಮಿಸಿ, ಮಹಾದಾಯಿ ನೀರನ್ನು ಮಲಪ್ರಭಾಗೆ ಹರಿಸುವ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ. ಕಳೆದ ವರ್ಷ ಡಿಸೆಂಬರ್ 22ರಂದು ಗೋವಾ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳು ಈ ಬಗ್ಗೆ ಚರ್ಚಿಸಿದ್ದಾರೆ. ಇನ್ನೂ ಚರ್ಚೆಯ ಹಂತದಲ್ಲೇ ಇರುವ ಈ ವಿಚಾರದ ಬಗ್ಗೆ ಈಗಲೇ ಅಂತಿಮ ನಿರ್ಧಾರ ಹೇಳಲಾಗದು ಎಂದರು.
ಈ ವಿಷಯದಲ್ಲಿ ಗೋವಾ ಸರ್ಕಾರ ಸಕಾರಾತ್ಮವಾಗಿ ಪ್ರತಿಕ್ರಿಯಿಸಿಲ್ಲ. ಹಾಗಂತ ನಮ್ಮ ಸರ್ಕಾರವೂ ಕೈಕಟ್ಟಿ ಕೂತಿಲ್ಲ. ಒಂದು ವೇಳೆ ಗೋವಾ ಸರ್ಕಾರ ನದಿ ನೀರು ಬಿಡಲು ಒಪ್ಪದಿದ್ದರೆ, ಪರ್ಯಾಯ ಯೋಜನೆ ಜಾರಿಗಾಗಿ ವರದಿಯಾಂದನ್ನು ಸಿದ್ಧಪಡಿಸಿದೆ ಎಂದು ಪಾಟೀಲ್ ಹೇಳಿದರು. ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ವರ ಅನುಪಸ್ಥಿತಿಯಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಜಲ ಸಮಸ್ಯೆ ಕುರಿತ ಪ್ರಶ್ನೆ ಕೇಳಿದರು.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications