ಬೆಂಗಳೂರು ನೀರು ಪೂರೈಕೆಯೂ ಖಾಸಗೀಕರಣ ಆಗೋಯ್ತು!
ಬೆಂಗಳೂರು : ಖಾಸಗೀಕರಣದ ಕೂಗು ಎಲ್ಲೆಡೆ ಕೇಳಿ ಬರುತ್ತಿರುವಾಗ. ಕರ್ನಾಟಕ ರಾಜ್ಯ ನೀರು ಪೂರೈಕೆಯನ್ನೂ ಖಾಸಗೀಕರಣ ಮಾಡುವ ದಿಟ್ಟ ಹೆಜ್ಜೆಯನ್ನು ಇಟ್ಟಿದೆ. ಮೊದಲ ಹಂತವಾಗಿ ಹಾಗೂ ಪ್ರಾಯೋಗಿಕವಾಗಿ ಈ ಖಾಸಗೀಕರಣ ಯೋಜನೆ ಬೆಂಗಳೂರಿನಿಂದಲೇ ಆರಂಭಗೊಳ್ಳಲಿದೆ.
ಈ ವಿಷಯವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ನಗರದಲ್ಲಿ ಕುಡಿಯುವ ನೀರು ಪೂರೈಕೆಯ ಜವಾಬ್ದಾರಿಯನ್ನು ಖಾಸಗಿಯವರಿಗೆ ವಹಿಸಲು ಈಗಾಗಲೇ ಹತ್ತು ಲಕ್ಷ ಜನಸಂಖ್ಯೆ ಇರುವ ಬೆಂಗಳೂರಿನ ಜನವಸತಿ ಪ್ರದೇಶವನ್ನು ಗುರುತಿಸಲಾಗಿದೆ. ಎರಡು ಬಹುರಾಷ್ಟ್ರೀಯ ಕಂಪನಿಗಳಿಗೆ ಗುತ್ತಿಗೆಯನ್ನೂ ನೀಡಲಾಗಿದೆ.
ಬೆಂಗಳೂರು ನಗರ ಮತ್ತು ಹೊರವಲಯದ ನಗರಸಭೆಗಳ ವ್ಯಾಪ್ತಿಯಲ್ಲಿ ತಲೆದೋರಿರುವ ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಕಾವೇರಿ ನಾಲ್ಕನೇ ಹಂತದ ಯೋಜನೆಗೆ ತ್ವರಿತ ಚಾಲನೆಯ ಭರವಸೆಯೂ ಮುಖ್ಯಮಂತ್ರಿಗಳಿಂದ ದೊರೆತಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಬಸವನಗುಡಿ ಕ್ಷೇತ್ರದ ಬಿ.ಜೆ.ಪಿ. ಶಾಸಕ ಕೆ.ಎನ್. ಸುಬ್ಬಾರೆಡ್ಡಿ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.
ಹಾಲಿ ತಿಪ್ಪಗೊಂಡನಹಳ್ಳಿ, ಹೆಸರುಘಟ್ಟ ಹಾಗೂ ಕಾವೇರಿಯ ಮೂರು ಹಂತದ ಯೋಜನೆಗಳಿಂದ ದಿನನಿತ್ಯ 693 ದಶಲಕ್ಷ ಲೀಟರ್ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಕೂಡ ನೀರಿನ ಬವಣೆ ನೀಗಿಲ್ಲ. ಹೀಗಾಗಿ ಕಾವೇರಿ 4ನೇ ಹಂತದ ಯೋಜನೆ ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗಿದ್ದು, ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದೆ ಎಂದೂ ಕೃಷ್ಣ ಹೇಳಿದ್ದಾರೆ. ನೀರು ಪೂರೈಕೆಗೆ ಅಡಚಣೆಯುಂಟಾಗದಂತೆ ವಿದ್ಯುತ್ ಪೂರೈಸಲು ವಿದ್ಯುತ್ ಮಂಡಳಿಗೆ ಸೂಚನೆಯನ್ನೂ ನೀಡಲಾಗಿದೆ.
ಇನ್‌ಫೋಸಿಸ್ ನೆರವಿನಿಂದ 100 ಶೌಚಾಲಯ : ನಿರ್ಮಲ ಬೆಂಗಳೂರು ಯೋಜನೆಯಡಿಯಲ್ಲಿ 100 ಶೌಚಾಲಯ ನಿರ್ಮಿಸಲು ಇನ್‌ಫೋಸಿಸ್ ಪ್ರತಿಷ್ಠಾನದ ನೆರವು ಪಡೆಯಲೂ ಸರಕಾರ ನಿರ್ಧರಿಸಿದೆ. ನಿರ್ಮಲ ಬೆಂಗಳೂರು ಯೋಜನೆಯಲ್ಲಿ ಶೌಚಾಲಯ ನಿರ್ಮಿಸಲು ಇನ್‌ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರು 8 ಕೋಟಿ ರುಪಾಯಿ ಅನುದಾನ ನೀಡಲು ಮುಂದೆ ಬಂದಿದ್ದಾರೆ ಎಂದು ಕಟ್ಟಾ ಸುಬ್ರಹ್ಣಣ್ಯ ನಾಯ್ಡು ಅವರ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಕೃಷ್ಣ ತಿಳಿಸಿದರು.
ನೂರು ಶೌಚಾಲಯಗಳ ಪೈಕಿ ಈಗಾಗಲೇ 33 ಶೌಚಾಲಯ ನಿರ್ಮಾಣಕ್ಕೆ ಸೂಕ್ತ ಸ್ಥಳ ಗುರುತಿಸಲಾಗಿದ್ದು, ಏಪ್ರಿಲ್ ತಿಂಗಳಿನಿಂದಲೇ ಕಾಮಗಾರಿ ಆರಂಭಿಸಲಾಗುವುದು, ಅಲ್ಲದೆ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 326 ಶೌಚಾಲಯಗಳ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲು ಆದೇಶ ನೀಡಲಾಗುವುದು ಎಂದೂ ಕೃಷ್ಣ ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications