ಮುರಿದ ಹೆಬ್ಬೆರಳು, ಉಳಿದ ಪಂದ್ಯಗಳಿಂದ ವೀರೇಂದ್ರ ಸೆಹ್ವಾಗ್ ಔಟ್
ಪುಣೆ : ಬೆಂಗಳೂರು ಒನ್ಡೇಯಲ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದ ಯುವ ಆಟಗಾರ ವೀರೇಂದ್ರ ಸೆಹ್ವಾಗ್, ಆಸ್ಟ್ರೇಲಿಯಾ ವಿರುದ್ಧದ ಸೀಮಿತ ಓವರ್ ಸರಣಿಯ ಉಳಿದ ಪಂದ್ಯಗಳಿಗೆ ಆಡುತ್ತಿಲ್ಲ. ಈ ಕಾರಣ ಫಾರ್ಮ್ ಕಳೆದುಕೊಂಡು, ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಯುವರಾಜ್ ಸಿಂಗ್ಗೆ ಇನ್ನೊಂದು ಅವಕಾಶ ಸಿಗಲಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯವಂತ ಲೆಲೆ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ವೀರೇಂದ್ರ ಸೆಹ್ವಾಗ್ ಅವರ ಹೆಬ್ಬೆಟ್ಟಿನ ಮೂಳೆ ಮುರಿದಿದ್ದು ಅದಕ್ಕೆ ಶಸ್ತ್ರಚಿಕಿತ್ಸೆ ಆಗಬೇಕಿದೆ. ಈ ಕಾರಣ ತಮ್ಮ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ವಿರುದ್ಧ ಮಿಂಚಿದ್ದ ಪಂಜಾಬ್ನ ಯುವರಾಜ್ ಸಿಂಗ್ ಅವರನ್ನು ಕರೆಸಿಕೊಳ್ಳಲಾಗುವುದು ಎಂದು ಲೆಲೆ ಹೇಳಿದರು.
ಬೆಂಗಳೂರಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ಮಾಡುತ್ತಿದ್ದಾಗ ಸೆಹ್ವಾಗ್ ಅವರ ಹೆಬ್ಬೆಟ್ಟು ಮುರಿದಿದೆ. ಆ ಪಂದ್ಯದಲ್ಲಿ 58 ರನ್ ಗಳಿಸಿದ್ದಲ್ಲದೆ 3 ವಿಕೆಟ್ ಪಡೆದ ಸೆಹ್ವಾಗ್ ಪಂದ್ಯ ಪುರುಷೋತ್ತಮರಾಗಿದ್ದರು. ಪ್ರಸ್ತುತ ಢಾಕಾದಲ್ಲಿರುವ ಯುವರಾಜ್ ಸಿಂಗ್, ಬುಧವಾರ ಪುಣೆಯಲ್ಲಿ ನಡೆಯುವ ಪಂದ್ಯಕ್ಕಂತೂ ಆಡುವುದಿಲ್ಲ. ಮಾರ್ಚ್ 31ರಂದು ಇಂದೋರ್ನಲ್ಲಿ ನಡೆಯಲಿರುವ ಸೀಮಿತ ಓವರ್ ಪಂದ್ಯದ 14 ಮಂದಿ ತಂಡದಲ್ಲಿ ಅವರು ಸ್ಥಾನ ಪಡೆಯಲಿದ್ದಾರೆ ಎಂದು ಲೆಲೆ ವಿವರಿಸಿದರು.
(ರಾಯ್ಟರ್ಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications