ಸಾಗರ ತಾ. ವರದಪುರದಲ್ಲಿ ಶ್ರೀಧರಸ್ವಾಮಿಗಳ ಆರಾಧನೆ
ಸಾಗರ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವರದಪುರದ ಶ್ರೀ ಶ್ರೀಧರ ಸೇವಾ ಮಹಾಮಂಡಲ ಏಪ್ರಿಲ್ 2ರಿಂದ 9ನೇ ತಾರೀಖಿನವರೆಗೆ ಶ್ರೀಕ್ಷೇತ್ರ ವರದಪುರದ ಶ್ರೀಧರಾಶ್ರಮದಲ್ಲಿ ಶ್ರೀಮತ್ ಸದ್ಗುರು ಭಗವಾನ್ ಶ್ರೀಧರಸ್ವಾಮಿಗಳ 28ನೇ ಆರಾಧನಾ ಮಹೋತ್ಸವವನ್ನು ಏರ್ಪಡಿಸಿದೆ.
ಆರಾಧನಾ ಮಹೋತ್ಸವದ ಅಂಗವಾಗಿ ಸದ್ಗುರುಗಳ ಸಮಾಧಿಗೆ ಮಹಾಪೂಜೆ, ಪುರಾಣ ಪ್ರವಚನ, ಭಜನೆ, ಕೀರ್ತನೆ, ಪಾಲಕಿ ಉತ್ಸವ, ಅಷ್ಟಾವಧಾನ ಮೊದಲಾದ ಕಾರ್ಯಕ್ರಮಗಳು ಜರುಗಲಿವೆ. ಆರಾಧನಾ ಮಹೋತ್ಸವದ ಸ್ಮರಣಾರ್ಥವಾಗಿ ಆಶ್ರಮದಲ್ಲಿ ಸದ್ಗ್ರಂಥಗಳ ವಾಚನಾಲಯವನ್ನು ಸ್ಥಾಪಿಸುವ ಉದ್ದೇಶವೂ ಮಂಡಳಿಗಿದೆ.
ಇದೇ ಸಂದರ್ಭದಲ್ಲಿ ಶ್ರೀ ಶ್ರೀಧರ ಸಾಂಗವೇದ ವಿದ್ಯಾಲಯದಲ್ಲಿ ವೇದಾಧ್ಯಯನ ಮಾಡಿ ಸಂಪನ್ನರಾದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನವೂ ನಡೆಯಲಿದೆ. ಆರಾಧನಾ ಮಹೋತ್ಸವದ ಅಂಗವಾಗಿ ಏ.2ರ ಸೋಮವಾರದಿಂದ ಏ.9ರವರೆಗೆ ಯಾಗಶಾಲಾ ಪ್ರವೇಶ, ಗುರು ಗಣಪತಿ ಪೂಜೆ, ಮಂಗಳವಾರ ಚತುರ್ದ್ರವ್ಯದಿಂದ ಗಣಪತಿ ಉಪನಿಷತ್ ಹವನ, ಪುರುಷಸೂಕ್ತ, ಶ್ರೀಸೂಕ್ತ ಹವನ, ಸದ್ಗುರು ಸಮಾಧಿಗೆ ಶತರುದ್ರಾಭಿಷೇಕ, ಸಹಸ್ರ ನಾಮಾರ್ಚನ ಪೂರ್ವಕ ಕಲ್ಪೋಕ್ತ ಮಹಾಪೂಜೆ, ಪಾಲಕಿ ಉತ್ಸವ ಮೊದಲಾದ ಧಾರ್ಮಿಕ ವಿಧಿಗಳೂ ಜರುಗಲಿವೆ ಎಂದು ಶ್ರೀಧರ ಸೇವಾ ಮಹಾಮಂಡಲದ ಪ್ರಕಟಣೆ ತಿಳಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications