ಬಿರುಸಾಗುತ್ತಿದೆ ಬಿಸಿಲು
ಬೆಂಗಳೂರು : ಬೆಂಗಳೂರಲ್ಲಿ ಕಳೆದ ಮೂರ್ನಾಲ್ಕು ದಿನದಿಂದಲೂ ದಿನದ ಗರಿಷ್ಠ ಉಷ್ಣಾಂಶ 36 ಡಿಗ್ರಿ ಆಸುಪಾಸಿನಲ್ಲೇ ಇದೆ. ಬಿಸಿಲು ಬಿರುಸಾಗಿದೆ. ನೆಲವೆಲ್ಲಾ ಕಾದು ಕೆಂಪಾಗಿದೆ. ಅಸಹನೀಯ ಧಗೆ. ಬೆಂಗಳೂರಿನ ಈಜುಕೊಳಗಳ ಮುಂದೆ ಮೈಲುಗಟ್ಟಲೆ ಕ್ಯೂ ಇದೆ. ತಂಪುಪಾನೀಯ ಮಾರುವ ಅಂಗಡಿಗಳ ಮುಂದೆ ಜನಜಂಗುಳಿ.
ರಾಜ್ಯದ ನದಿಗಳು, ನೀರಿರುವ ಕೆರೆಗಳು ಬಾವಿಗಳಲ್ಲಿ ಈಜುವವರ ಸಂಖ್ಯೆಯೂ ಹೆಚ್ಚಿದೆ. ಎಲ್ಲಾ ಸೂರ್ಯ ಮಹಿಮೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಮತ್ತದೇ ಒಣಹವೆ. ಗರಿಷ್ಠ ತಾಪಮಾನ ಕೆಲವೆಡೆ ಕುಸಿದಿದ್ದರೆ, ಮತ್ತೆ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಏರಿದೆ. ಇನ್ನು ಕೆಲವೆಡೆ ಸಾಮಾನ್ಯ ಮಟ್ಟದಲ್ಲೇ ಇತ್ತು. ಕನಿಷ್ಠ ಉಷ್ಣಾಂಶ ಕೂಡ ಬಹುತೇಕ ಇದೇ ಜಾಡನ್ನೇ ಅನುಸರಿಸಿತ್ತು.
ರಾಜ್ಯದ ಅತಿಹೆಚ್ಚಿನ ತಾಪಮಾನ ಯಥಾಪ್ರಕಾರ ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 18.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಗುರುವಾರ ಬೆಳಗ್ಗೆ ವರೆಗಿನ ಮುನ್ಸೂಚನೆಯಂತೆ ರಾಜ್ಯದಲ್ಲಿ ಮುಖ್ಯವಾಗಿ ಒಣಹವೆಯೇ ಮುಂದುವರಿಯಲಿದೆ. ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವ ಸಾಧ್ಯತೆ ಇಲ್ಲ ಎನ್ನುತ್ತದೆ ಹವಾಮಾನ ಇಲಾಖೆ.
ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಗರಿಷ್ಠ ಉಷ್ಣಾಂಶ 36 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications